ಮಾಜಿ ಸಚಿವ ಕಿಮ್ಮನೆ ರತ್ನಾಕರ್ ​ಗೆ ಪತ್ರ ಬರೆದ ಡಿಸಿಎಂ ಡಿ.ಕೆ.ಶಿವಕುಮಾರ್​

Promotion

ಬೆಂಗಳೂರು,ಮೇ,26,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿರುವ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.

ಕಿಮ್ಮನೆ ರತ್ನಾಕರ್ ಅವರಿಗೆ ಬರೆದು ಆತ್ಮವಿಶ್ವಾಸದ ಮಾತುಗಳನ್ನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್,  ಚುನಾವಣೆಯಲ್ಲಿ ಕಾಂಗ್ರೆಸ್​ ಅಭೂತಪೂರ್ವವಾದ ಬಹುಮತ ಸಿಕ್ಕಿದೆ. ತಾವು ಈ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತರಾಗಿರಬಹುದು. ಆದರೆ ಈ ಗೆಲುವಿನಲ್ಲಿ ನಿಮ್ಮೆಲ್ಲರ ಪರಿಶ್ರಮವಿದೆ. ನಿರೀಕ್ಷೆಗೂ ಮೀರಿ ವಿಧಾನಸಭೆ ಚುನಾವಣೆಯಲ್ಲಿ ಕೆಲಸ ಮಾಡಿದ್ದೀರಿ. ವರಿಷ್ಠರು ಮುಂದಿನ ಲೋಕಸಭೆ ಚುನಾವಣೆಗೆ ಒತ್ತು ನೀಡಿದ್ದಾರೆ.

ಚುನಾವಣೆ ಸೋಲಿನ ಬಗ್ಗೆ ಎದೆಗುಂದದೆ ಪಕ್ಷ ಸಂಘಟನೆ ಮಾಡಿ ಎಂದು ಡಿ.ಕೆ.ಶಿವಕುಮಾರ್​ ಪತ್ರ  ತಿಳಿಸಿದ್ದಾರೆ.

Key words: DCM-DK Shivakumar – letter – former minister -Kimmane Ratnakar