ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಲ ನಾಯಕರ ಅಸಮಾಧಾನ- ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ..

Promotion

ಬೆಂಗಳೂರು,ಮೇ,27,2023(www.justkannada.in):  ಇಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದು 24 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮಧ್ಯೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಲ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದು ಈ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್,  ಇದಕ್ಕೆ ನಾನೇನು ಮಾಡಲು ಸಾಧ್ಯ.  ನಾನೂ ಕೂಡ ಸಾಕಷ್ಟು ಬಾರಿ ಅವಕಾಶದಿಂದ ವಂಚಿತನಾಗಿದ್ದೆ. ಧರಂಸಿಂಗ್, ಸಿದ್ದರಾಮಯ್ಯ ಅವರ ಸಂಪುಟದಲ್ಲಿ ನನಗೂ ಅವಕಾಶ ಸಿಕ್ಕಿರಲಿಲ್ಲ. ಆದರೆ, ನಾನು ತಾಳ್ಮೆಯಿಂದ ಕಾದಿದ್ದೆ ಎಂದು ಹೇಳಿದರು.

ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನ ಮಾಡಿಕೊಂಡರೆ ನಾನು ಏನು ಮಾಡಲು ಆಗುತ್ತೆ? ಮಾತನಾಡುವವರು ಮಾತನಾಡಲಿ. ನಾನೇನು ಮಾತನಾಡುವುದಿಲ್ಲ. ತಾಳ್ಮೆ ಇದ್ದರೆ ಮುಂದಿನ ದಿನಗಳಲ್ಲಿ ಸಿಗುತ್ತೆದೆ ಎಂದರು.

Key words: DCM- DK Sivakumar -reacted – displeasure – losing -minister’s- post.