ಮುಖ್ಯಮಂತ್ರಿ ಸ್ಥಾನಕ್ಕೆ ಹಾತೊರೆಯುತ್ತಿರುವ ಸಿದ್ದರಾಮಯ್ಯ: ಡಿಸಿಎಂ ಗೋವಿಂದ ಕಾರಜೋಳ ಟೀಕೆ

Promotion

ಬೆಂಗಳೂರು, ಮೇ 30,2021 (www.justkannada.in): ಡಿಸಿಎಂ ಗೋವಿಂದ ಕಾರಜೋಳ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ತಾವು ಮುಖ್ಯಮಂತ್ರಿಯಾಗಬೇಕು ಎಂದು ಹಾತೊರೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಕಾರಜೋಳ, ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಾ, ಸರ್ಕಾರದ ವಿರುದ್ಧ ಅನಗತ್ಯ ಟೀಕೆ ಮಾಡುತ್ತಾ ನಾನೇ ಮುಂದಿನ ಸಿಎಂ ಎಂದು ಹೇಳುತ್ತಿದ್ದಾರೆ ಸಿದ್ದರಾಮಯ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅನಾವಶ್ಯಕವಾಗಿ ಪ್ರಧಾನಿ ಮೋದಿ, ಸಿಎಂ ಬಿ.ಎಸ್.ವೈ ವಿರುದ್ಧ ಮಾತನಾಡುವುದನ್ನು ನಿಲ್ಲಿಸಬೇಕು. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರಕ್ಕೆ ಸಲಹೆ ಸೂಚನೆ ನೀಡುವಂತೆ ತಿಳಿಸಿದ್ದಾರೆ.