ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾಗಿ ಚರ್ಚಿಸಿದ ಡಿಸಿಎಂ ಲಕ್ಷ್ಮಣ್ ಸವದಿ…

Promotion

ನವೆದೆಹಲಿ,ನವೆಂಬರ್,27,2020(www.justkannada.in):  ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ಶುಕ್ರವಾರ ನವದೆಹಲಿಯಲ್ಲಿ  ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದಾಗಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಕಂದಾಯ ಸಚಿವ ಆರ್.ಅಶೋಕ್ ಇಂದು ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಅವರನ್ನ ಭೇಟಿಯಾಗಿ ಚರ್ಚಿಸಿದರು.

ಬೆಂಗಳೂರು ನಗರದಲ್ಲಿ ರಕ್ಷಣಾ  ಇಲಾಖೆಯ ವ್ಯಾಪ್ತಿಯಲ್ಲಿ ಹಲವು ಭೂಪ್ರದೇಶಗಳನ್ನು ಒಳಗೊಂಡಿರುವುದರಿಂದ ರಸ್ತೆ ಅಭಿವೃದ್ಧಿಯ ಕೆಲಸ ಕಾರ್ಯಗಳಿಗೆ ಅಡಚಣೆ ಉಂಟಾಗಿ ವಾಹನ ದಟ್ಟಣೆ ಮಿತಿ ಮೀರುತ್ತಿದೆ. ಆದ್ದರಿಂದ ಈಗಾಗಲೇ ಕಂದಾಯ ಇಲಾಖೆಯಿಂದ ರಕ್ಷಣಾ ಇಲಾಖೆಗೆ ಪರ್ಯಾಯ ಜಾಗವನ್ನು ನೀಡಲು ಕ್ರಮ ವಹಿಸಲಾಗಿದೆ, ಅದ್ದರಿಂದ ರಸ್ತೆ ವಿಸ್ತರಣೆಗೆ  ತೊಂದರೆ ಉಂಟಾಗುತ್ತಿರುವ ಜಾಗಗಳನ್ನು ತೆರವು ಮಾಡಿಕೊಡುವಂತೆ ರಕ್ಷಣಾ ಸಚಿವ ಮನವಿ ರಾಜನಾಥ್ ಸಿಂಗ್ ಅವರಿಗೆ  ಮನವಿ ಮಾಡಿದರು.

Key words: DCM- Laxman Sawadi -met – Union Defense Minister- Rajnath Singh.