ಮೃತ ಪುತ್ರನ ಭಾವಚಿತ್ರದೊಂದಿಗೆ ಯುವರತ್ನ ವೀಕ್ಷಿಸಿದ ಪೋಷಕರು : ನಟ ಪುನೀತ್ ರಾಜ್ ಕುಮಾರ್ ಪ್ರತಿಕ್ರಿಯಿಸಿದ್ದು, ಹೀಗೆ…

Promotion

ಬೆಂಗಳೂರು,ಏಪ್ರಿಲ್,05,2021(www.justkannada.in) : ಮೈಸೂರಿನ ಮುರಳಿಧರ್ ಹಾಗು ಕುಟುಂಬದವರು ಅವರ ದಿ.ಪುತ್ರ ಹರಿಕೃಷ್ಣನ್ ಫೋಟೋ ಜೊತೆಗೆ ಯುವರತ್ನ ಸಿನಿಮಾ ನೋಡಿರುವ ದೃಶ್ಯಗಳನ್ನು ನೋಡಿ ನನ್ನ ಮನಸ್ಸು ಭಾರವಾಯಿತು ಎಂದು ನಟ ಪುನೀತ್ ರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಮುರುಳೀಧರ್ ಎಂಬುವವರ ಪುತ್ರ ಹರಿಕೃಷ್ಣನ್ ಈಜಲು ಹೋಗಿ ನೀರಲ್ಲಿ ಮುಳುಗಿ ಸಾವನಪ್ಪಿದ್ದ. ಆತ ನಟ ಪುನೀತ್ ಅಭಿಮಾನಿಯಾಗಿದ್ದು, ಯುವರತ್ನ ನೋಡಬೇಕೆಂದು ಆಸೆಪಟ್ಟಿದ್ದ. ಮಗನ ಆಸೆಯನ್ನು ತೀರಿಸುವ ಸಲುವಾಗಿ, ಸಾವನಪ್ಪಿದ ಮಗನಿಗೂ ಒಂದು ಟಿಕೆಟ್ ತೆಗೆದುಕೊಂಡು ಫೋಟೋ ಇಟ್ಟುಕೊಂಡು ಪೋಷಕರು ಸಿನಿಮಾ ವೀಕ್ಷಿಸಿದ್ದಾರೆ.Dead-Son's-portrait-Yuvaratna-Viewed-Parents-Actor-Puneet Raj Kumar-Responded

ಈ ವಿಷಯ ತಿಳಿದು ನಟ ಪುನೀತ್ ರಾಜ್ ಕುಮಾರ್ ಟ್ವೀಟ್ ಮಾಡಿದ್ದು, ಬಾಲಕ ಹರಿಕೃಷ್ಣನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ತಿಳಿಸಿದ್ದಾರೆ.

key words : Dead-Son’s-portrait-Yuvaratna-Viewed-Parents-Actor-Puneet Raj Kumar-Responded