ಲತಾ ಮಂಗೇಶ್ಕರ್ ನಿಧನ: ದೇಶದಲ್ಲಿ ಎರಡು ದಿನ ಶೋಕಾಚರಣೆ ಘೋಷಣೆ

Promotion

ಬೆಂಗಳೂರು, ಫೆಬ್ರವರಿ 06,2022 (www.justkannada.in): ಲತಾ ಮಂಗೇಶ್ಕರ್ ನಿಧನದ ಹಿನ್ನೆಲೆಯಲ್ಲಿ ದೇಶದಲ್ಲಿ ಎರಡು ದಿನಗಳ ಕಾಲ ಶೋಕಾಚರಣೆಯನ್ನು ಸರ್ಕಾರ ಘೋಷಿಸಿದೆ.

ಖ್ಯಾತ ಗಾಯಕಿ, ಭಾರತ ರತ್ನ ಲತಾ ಮಂಗೇಶ್ಕರ್ (92) ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು.

ಈ ಹಿನ್ನೆಲೆಯಲ್ಲಿ ದೇಶದಲ್ಲಿ ಎರಡು ದಿನಗಳ ಕಾಲ ಶೋಕಾಚರಣೆಯನ್ನು ಸರ್ಕಾರ ಘೋಷಿಸಿದೆ. ರಾಷ್ಟ್ರಧ್ವಜವು ಅರ್ಧ ಮಟ್ಟದಲ್ಲಿ ಹಾರಾಡಲಿದೆ.