ಎಸ್ ಪಿಬಿ ನಿಧನದಿಂದ ಸಂಗೀತ ಲೋಕದಲ್ಲಿ ಶೂನ್ಯ ಸೃಷ್ಟಿಯಾಗಿದೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ…

kannada t-shirts

ಬೆಂಗಳೂರು,ಸೆಪ್ಟಂಬರ್,25,2020(www.justkannada.in): ಗಾನ ಗಾಂಧರ್ವ, ಸಂಗೀತ ದಿಗ್ಗಜ ಎಸ್. ಪಿ ಬಾಲ ಸುಬ್ರಹ್ಮಣ್ಯಂ ಅವರ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಟ್ವಟ್ಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಮ ಸುಪ್ರಸಿದ್ಧ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವುಂಟಾಗಿದೆ. ಕನ್ನಡ ಸೇರಿದಂತೆ 16ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 40 ಸಾವಿರ ಹಾಡುಗಳನ್ನು ಹಾಡಿದ್ದ ಎಸ್ಪಿಬಿ ಅವರ ಸರಳ ಸಜ್ಜನಿಕೆಯ ವ್ಯಕ್ತಿತ್ವ ಅನುಕರಣೀಯ ಎಂದು ಗುಣಗಾನ ಮಾಡಿದ್ದಾರೆ.death S P Balasubramaniyam-   Former CM -HD Kumaraswamy- condolences.

ಎಸ್ಪಿಬಿ ಅವರ ನಿಧನದಿಂದ ಸಂಗೀತ ಲೋಕದಲ್ಲಿ ಶೂನ್ಯ ಸೃಷ್ಟಿಯಾಗಿದೆ. ತಮ್ಮ ಮಧುರ ಕಂಠದಿಂದ ಸಂಗೀತ ಪ್ರೇಮಿಗಳ ಮನಸೂರೆಗೊಂಡಿದ್ದ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಹೆಚ್.ಡಿಕೆ ಟ್ವಿಟ್ಟರ್ ನಲ್ಲಿ ಪ್ರಾರ್ಥಿಸಿದ್ದಾರೆ.death S P Balasubramaniyam-   Former CM -HD Kumaraswamy- condolences.

ಹಾಗೆಯೇ ಕರೋನಾ ಸೋಂಕಿನಿಂದ ಎಸ್ಪಿಬಿ ಅವರು ಚೇತರಿಸಿಕೊಳ್ಳಲಾಗದೆ ಜೀವ ತೆತ್ತಿದ್ದು ಅತ್ಯಂತ ದುರ್ದೈವದ ಸಂಗತಿ. ಬಾಲಸುಬ್ರಹ್ಮಣ್ಯಂ ಗಾನಸುಧೆಯ ಮೋಡಿಗೆ ಒಳಗಾದವರಲ್ಲಿ ನಾನೂ ಒಬ್ಬ. ಮರುಜನ್ಮ ಎಂಬುದಿದ್ದರೆ ಕನ್ನಡನಾಡಿನಲ್ಲಿ ಹುಟ್ಟಲು ಬಯಸುತ್ತೇನೆ ಎಂಬ ಎಸ್ಪಿಬಿಯವರ ಮಾತು ಈಗಲೂ ಕಿವಿಯಲ್ಲಿ ಅನುರಣಿಸುತ್ತಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ಧಾರೆ.

Key words:  death S P Balasubramaniyam-   Former CM -HD Kumaraswamy- condolences.

website developers in mysore