ಹಿರಿಯ ಸಾಹಿತಿ ಚಂಪಾ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿಕೆ, ಸಚಿವ ಗೋವಿಂದ ಕಾರಜೋಳ ಸೇರಿ ಹಲವರಿಂದ ಸಂತಾಪ.

ಬೆಂಗಳೂರು,ಜನವರಿ,10,2022(www.justkannada.in):  ಹಿರಿಯ  ಕವಿ, ಸಾಹಿತಿ ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸಚಿವ ಗೋವಿಂದ ಕಾರಜೋಳ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ (ಚಂಪಾ)ಅವರ ಅಕಾಲಿಕ ಅಗಲಿಕೆಯಿಂದ ಮನಸ್ಸಿಗೆ ತೀವ್ರ ದುಃಖವಾಗಿದೆ.

ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅವರ ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸಂತಾಪ ಸೂಚಿಸಿದ್ದಾರೆ.

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ, ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ, ಸಂಘಟನಕಾರ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ

ಚಂಪಾ ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಸಚಿವ ಕೆ.ಎಸ್ ಈಶ್ವರಪ್ಪ ಸಂತಾಪ.

ಚಂಪಾ ಎಂದೇ  ಸಾಹಿತ್ಯ ಲೋಕದಲ್ಲಿ ಪ್ರಖ್ಯಾತಿ ಪಡೆದಿದ್ದ ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರ ಅಗಲಿಕೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ  ಕೆ ಎಸ್ ಈಶ್ವರಪ್ಪರವರು ಸಂತಾಪ ಸೂಚಿಸಿದ್ದಾರೆ.

ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರ ಅಕಾಲಿಕ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಭಾಷೆ, ನೆಲ,ಜಲ ಗಳ ಹೋರಾಟಕ್ಕಾಗಿ ನಡೆದ ಹಲವಾರು ಹೋರಾಟಗಳನ್ನು ತಾವೇ ಖುದ್ದಾಗಿ ರೂಪಿಸಿದ್ದಲ್ಲದೆ ಅವುಗಳಲ್ಲಿ ಮುಂಚೂಣಿಯಾಗಿ ನಿಂತು,ಹೋರಾಟಗಳಿಗೆ ತಾರ್ಕಿಕ ಅಂತ್ಯ ಕಾಣಿಸುತಿದ್ದರು ಎಂದು ಸಚಿವರು ಸ್ಮರಿಸಿದ್ದಾರೆ.

ಪಾಟೀಲರ  ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ  ಮತ್ತು  ಅವರ ಅಭಿಮಾನಿಗಳೀಗೆ ನೀಡಲಿ ಎಂದು, ಭಗವಂತನಲ್ಲಿ   ಪ್ರಾರ್ಥಿಸುತ್ತೇನೆ ಎಂದು ಸಚಿವರು ಕೋರಿದ್ದಾರೆ.

Key words: death-writer-chandrashekar patil- condole

ENGLISH SUMMARY…

Veteran litterateur Champa no more: Former CM HDK, Minister Govind Karajola and other dignitaries condole
Bengaluru, January 10, (www.justkannada.in): Former Chief Minister H.D. Kumaraswamy, Minister Govind Karajola, and other dignitaries have grieved over the demise of the veteran poet, litterateur Chandrashekar Patil, popularly known as Champa.
“I am deeply saddened to know the demise of Prof. Chandrashekar Patil (Champa). It is a huge loss to the literary world. The Kannada literary world has lost one of its gems. I pray to God to give the strength to all his family members and fans to bear this loss.” – Govind Karajola, Water Resources Minister.
“Sri Chandrashekar Patil was a pro-Kannada activist, poet, dramatist, organizer, journalist, and the former President of Kannada Sahitya Parishath. It is indeed very sad to know about his demise. Popularly known as Champa in the world of literature, his contribution to the Kannada language, land, and natural resources is immense. It is a huge loss to the state. May his soul rest in peace, and I pray to God to give the strength to his family members and fans to bear his loss.” – H.D. Kumaraswamy
Keywords: Prof. Chandrashekar Patil/ Champa/ No more/ dignitaries/ condole