ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ವರಿಷ್ಠರಿಂದ ನಿರ್ಧಾರ- ಕೇಂದ್ರಸಚಿವ ಪ್ರಹ್ಲಾದ್ ಜೋಶಿ.

ಬೆಂಗಳೂರು,ಮೇ,16,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 66 ಸ್ಥಾನಗಳನ್ನ ಗಳಿಸಿ ಸೋಲನುಭವಿಸಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉತ್ತರಿಸಿದ್ದಾರೆ.

ಈ ಕುರಿತು ಮಾತನಾಡಿದ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ. ಪಕ್ಷದ ಸೋಲಿಗೆ ಬಿ.ಎಲ್​.ಸಂತೋಷ್ ಕಾರಣ ಎಂಬ ಆರೋಪವಿದೆ. ರಾಜ್ಯ ಬಿಜೆಪಿ ಘಟಕವೇ ಸೋಲಿನ ಹೊಣೆಯನ್ನ ಹೊರುತ್ತದೆ. ಎಲ್ಲಿ ಏನು ತಪ್ಪಾಗಿದೆ ಎಂದು ನಾವು ವಿಮರ್ಶೆ ಮಾಡುತ್ತೇವೆ ಎಂದರು.

ವಿಧಾನಸಭೆ ಚುನಾವಣೆ ಬೇರೆ, ಲೋಕಸಭೆ ಚುನಾವಣೆ ಬೇರೆ. ಬೇರೆ ಬೇರೆ ವಿಚಾರಗಳಲ್ಲಿ ಈ 2 ಚುನಾವಣೆಗಳು ನಡೆಯುತ್ತವೆ. ಈಗ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ 330ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ  ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.

ಈ ಚುನಾವಣೆ ಬಿಜೆಪಿ ಪಾಲಿಗೆ ನಿರಾಶದಾಯಕ ಫಲಿತಾಂಶ ಎಂದು ಬೇಸರ ಹೊರ ಹಾಕಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಪಕ್ಷದ ಸೋಲನ್ನು ನಾನು ಸವಾಲಾಗಿ ಸ್ವೀಕರಿಸುತ್ತೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಶ್ರಮ ವಹಿಸುತ್ತೇವೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.

Key words: Decision – -BJP –state- president-change-Union Minister -Prahlad Joshi.