ಮುಂಬೈ ಕರ್ನಾಟಕವನ್ನ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲು ಸಂಪುಟ ಸಭೆಯಲ್ಲಿ ನಿರ್ಧಾರ.

ಬೆಂಗಳೂರು,ನವೆಂಬರ್,8,2021(www.justkannada.in):  ಮುಂಬೈ ಕರ್ನಾಟಕ ಪ್ರದೇಶಕ್ಕೆ ಇನ್ಮುಂದೆ ‘ಕಿತ್ತೂರು ಕರ್ನಾಟಕ’ ಎಂದು ನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ಸಚಿ ಜೆ.ಸಿ ಮಾಧುಸ್ವಾಮಿ, ಇಷ್ಟು ದಿನ ಮುಂಬೈ ಕರ್ನಾಟಕ ಎಂದು ಕರೆಸಿಕೊಳ್ಳುತ್ತಿದ್ದ ಉತ್ತರ ಕರ್ನಾಟಕದ ಉತ್ತರ ಕನ್ನಡ, ಬೆಳಗಾವಿ, ವಿಜಯಪುರ, ಗದಗ, ಧಾರವಾಡ, ಬಾಗಲಕೋಟೆ, ಹಾವೇರಿ ಜಿಲ್ಲೆಗಳನ್ನು ಇನ್ನು ಮುಂದೆ ‘ಕಿತ್ತೂರು ಕರ್ನಾಟಕ’ ಎಂದು ಕರೆಯಲಾಗುವುದು. ಈ ಏಳೂ ಜಿಲ್ಲೆಗಳಿಗೆ ‘ಕಿತ್ತೂರು ಕರ್ನಾಟಕ’ ಎಂದು ಮರು ನಾಮಕರಣ ಮಾಡಲಾಗಿದೆ ಎಂದರು.lockdown-exemption-office-attendance-ministry-staff-officer

ಹಾಗೆಯೇ ಒಂದು ಮೆಟ್ರಿಕ್ ಟನ್ ನದಿ ಮರಳಿಗೆ ರೂ 700 ದರ ನಿಗದಿಗೆ ಹಾಗೂ ಮರಳು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮತ್ತು ಮಾರಾಟಕ್ಕೂ ಅವಕಾಶ ಸಿಗುವಂತೆ ಮಾಡಲು ಸ್ಟಾಕ್ ಯಾರ್ಡ್ ಮಾಡಲು ಸರ್ಕಾರ ನಿರ್ಧರಿಸಿದೆ. ಮರಳು ಖರೀದಿಗೆ ಆನ್​ಲೈನ್​ನಲ್ಲಿಯೂ ಇನ್ನು ಮುಂದೆ ಬೇಡಿಕೆ ಸಲ್ಲಿಸಬಹುದು. ಮರಳು ನೀತಿಯ ಉಪಖನಿಜ ರಿಯಾಯ್ತಿ ನಿಯಮಗಳಿಗೂ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

Key words: Decision – Cabinet meeting – Mumbai Karnataka- Kittur Karnataka