7ನೇ ತರಗತಿಗೆ ಸಾಮಾನ್ಯ ಪರೀಕ್ಷೆ ನಡೆಸಲು ತೀರ್ಮಾನ- ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ…

ಬೆಂಗಳೂರು,ಜ,7,2020(www.justkannada.in):   ಏಳನೇ ತರಗತಿಗೆ ಸಾಮಾನ್ಯ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಇಂದು ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಪಬ್ಲಿಕ್ ಪರೀಕ್ಷೆ ಬದಲಾಗಿ ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ಮಾಡುವುದಕ್ಕೆ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ . ಮಾರ್ಚ್ ನಲ್ಲಿ ಸಾಮಾನ್ಯ ಪರೀಕ್ಷೆ ನಿಗದಿಯಾಗಿದೆ. ಕೆಲ ಮಾನದಂಡಗಳೊಂದಿಗೆ ಪರೀಕ್ಷೆ ಮಾಡಲಾಗುವುದು ಎಂದರು.

ಇನ್ನು ಈ ಪರೀಕ್ಷೆಯಲ್ಲಿ ಯಾವುದೇ ಮಗುವನ್ನ ಫೇಲ್ ಮಾಡಲ್ಲ. ಪಬ್ಲಿಕ್ ಪರೀಕ್ಷೆ ಅಂತ ಹೆಸರು ಕೇಳಿ ಎಲ್ಲರೂ ಭಯಗೊಂಡಿದ್ದಾರೆ. ಹೀಗಾಗಿ ಪಬ್ಲಿಕ್ ಪರೀಕ್ಷೆ ಬದಲಾಗಿ ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ. ಮಕ್ಕಳ ಕಲಿಕಾಮಟ್ಟ ಮೌಲ್ಯಮಾಪನ ಮಾಡಲು ಈ ಪರೀಕ್ಷೆ ನಡೆಸಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.

Key words: Decision -conduct -general examination – 7th Class – Education Minister -Suresh Kumar