ಸ್ಪರ್ಧೆ ಬಗ್ಗೆ ಏನೇ ನಿರ್ಧಾರ ತೆಗದುಕೊಂಡರೂ ನಾನು ಬದ‍್ಧ- ಶಾಸಕ ಯತೀಂದ್ರ ಸಿದ್ದರಾಮಯ್ಯ.

ಮೈಸೂರು,ಮಾರ್ಚ್,18,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ತೊಡಗಿರುವ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ಮಧ್ಯೆ ಕೋಲಾರದಿಂದ ಸ್ಪರ್ಧಿಸದೆ ವರುಣಾದಿಂದ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ಧರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಶಾಸಕ ಯತೀಂದ್ರ ಸಿದ್ಧರಾಮಯ್ಯ, ಹೈಕಮಾಂಡ್ ಏನು ಹೇಳಿದೆಯೋ ಗೊತ್ತಿಲ್ಲ. ಈ ಬಗ್ಗೆ ತಂದೆಯವರ ಬಳಿ ಕೇಳಿ ಮಾತನಾಡುತ್ತೇನೆ. ಹೈಕಮಾಂಡ್ ಸ್ಪರ್ಧೆ ಬಗ್ಗೆ ಏನೇ ನಿರ್ಧಾರ ತೆಗೆದುಕೊಂಡರೂ ನಾನು ಬದ್ಧ ಎಂದಿದ್ದಾರೆ.

Key words:  decision – contest-committed – MLA- Yathindra Siddaramaiah.