ನಾಳೆ ಸದನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ನಿರ್ಧಾರ.

ಬೆಂಗಳೂರು,ಡಿಸೆಂಬರ್,20,2021(www.justkannada.in):   ರಾಜ್ಯದಲ್ಲಿ ಭಾರಿ ಚರ್ಚೆಯಾಗುತ್ತಿರುವ ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.

ಈ ಹಿನ್ನೆಲೆಯಲ್ಲಿ ನಾಳೆ ಈ ಮತಾಂತರ ನಿಷೇಧ ಮಸೂದೆ ಮಂಡನೆ ಮಾಡಲು ನಿರ್ಧರಿಸಲಾಗಿದೆ. ವಿಧೇಯಕದಲ್ಲಿ ಕೆಲ ಬದಲಾವಣೆಗಳೊಂದಿಗೆ ವಿಧೇಯಕ ಮಂಡನೆಗೆ ಒಪ್ಪಿಗೆ ಸೂಚಿಸಲಾಗಿದೆ.ನಾಳೆ ವಿಧಾನಸಭೆ ಕಲಾಪದಲ್ಲಿ ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ಮಂಡನೆಯಾಗಲಿದೆ.

ಮತಾಂತರ ನಿಷೇಧ ಕಾಯ್ದೆಗೆ ರಾಜ್ಯದಲ್ಲಿ ಪರ ವಿರೋಧವಿದೆ. ಈ ಮಧ್ಯೆ ಈ ಕಾಯ್ದೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು ನಾಳೆ ಸದನದಲ್ಲಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.

Key words: Decision – Convention –Prohibition-cabinet meeting-session