ನಟ ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ನೀಡುವ ಬಗ್ಗೆ ಸೂಕ್ತ ಸಮಯದಲ್ಲಿ ಚರ್ಚಿಸಿ ನಿರ್ಧಾರ- ಸಿಎಂ ಬಸವರಾಜ ಬೊಮ್ಮಾಯಿ

Promotion

ಬೆಂಗಳೂರು,ನವೆಂಬರ್,8,2021(www.justkannada.in): ನಟ ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ನೀಡುವ ಬಗ್ಗೆ ಸೂಕ್ತ ಸಮಯದಲ್ಲಿ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ 11 ನೇ ದಿನದ ಪುಣ್ಯತಿಥಿ ಕಾರ್ಯ ಹಿನ್ನೆಲೆ ಈ ಕಾರ್ಯದಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪುನೀತ್ ಕುಟುಂಬದವರ ಜೊತೆಗೆ ಸರ್ಕಾರ ಇದೆ. 11 ನೇ ದಿನದ ಕಾರ್ಯದಲ್ಲಿ ಭಾಗಿಯಾಗುವಂತೆ ತಿಳಿಸಿದ್ದು, ಭಾಗಿಯಾಗಲಿದ್ದೇನೆ.

ಪುನೀತ್ ರಾಜಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವ ಕುರಿತಂತೆ ಸೂಕ್ತ ಸಮಯದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಪುನೀತ್ ರಾಜ್ ಕುಮಾರ್ ಕುಟುಂಬದ ಜತೆಯೂ ಚರ್ಚಿಸಲಾಗುತ್ತದೆ ಎಂದರು.

key words: Decision – discuss- actor –punith raj kumar- Padma Shri- award –  CM- Basavaraja Bommai