ನಾಳೆ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಭೆಯಲ್ಲಿ ಶಾಲೆ ಆರಂಭದ ಬಗ್ಗೆ ಚರ್ಚಿಸಿ ತೀರ್ಮಾನ-ಶಿಕ್ಷಣ ಸಚಿವ ಸುರೇಶ್ ಕುಮಾರ್.

Promotion

ಬೆಂಗಳೂರು,ಜೂನ್,24,2021(www.justkannada.in):  ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭಕ್ಕೆ ತಜ್ಞರ ಸಮಿತಿ ಸಲಹೆ ನೀಡಿದ್ದು ಈ ಸಂಬಂಧ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.jk

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ನಾವು ಬೆಂಗಳೂರಿನ ಬಗ್ಗೆ ಮಾತ್ರ ಯೋಚನೆ ಮಾಡುತ್ತೇವೆ. ಆದರೆ ಗ್ರಾಮೀಣ ಭಾಗದ ಮಕ್ಕಳು ಹೆಸರು ಬರೆಯುವುದನ್ನೇ ಮರೆತಿದ್ದಾರೆ. ಲೆಕ್ಕವನ್ನ ಮರತಿದ್ದಾರೆ. ನಾಳೆ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಭೆ ಇದೆ. ಸಭೆಯಲ್ಲಿ ಶಾಲೆ ಆರಂಭದ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು.

Key words:  decision -discuss -start – school -Education Minister- Suresh Kumar.