ಇತಿಹಾಸ ಪ್ರಸಿದ್ದ ತಲಕಾಡಿನಲ್ಲಿ ಗಂಗರ ಉತ್ಸವ ನಡೆಸಲು ತೀರ್ಮಾನ-ಸಚಿವ ಸಿ.ಪಿ ಯೋಗೇಶ್ವರ್.

ಮೈಸೂರು,ಜುಲೈ,19,2021(www.justkannada.in): ಇತಿಹಾಸ ಪ್ರಸಿದ್ದ ತಲಕಾಡಿನಲ್ಲಿ ಗಂಗರ ಉತ್ಸವ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೇಶ್ವರ್ ತಿಳಿಸಿದರು.jk

ಸೋಮನಾಥಪುರ ಶ್ರೀ ಕೇಶವ ದೇವಾಲಯಕ್ಕೆ ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೇಶ್ವರ್ ಭೇಟಿ ನೀಡಿದರು. ಪ್ರವಾಸೋದ್ಯಮ ಅಭಿವೃದ್ಧಿಗೆ ಮತ್ತು ಪ್ರವಾಸಿಗರಿಗೆ ಪೂರಕ ಸೌಲಭ್ಯಗಳ ಅಭಿವೃದ್ಧಿಗೆ ಚಿಂತನೆ ನಡೆಸಲಾಗುತ್ತಿದೆ. ಈ ನಡುವೆ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಚಿವ ಸಿ.ಪಿಯೋಗೇಶ್ವರ್ ಪರಿಶೀಲನೆ ನಡೆಸಿದರು.

ತಲಕಾಡಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ್, ಇತಿಹಾಸ ಗೊತ್ತಿಲ್ಲದವರು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ಪ್ರವಾಸೋದ್ಯಮ‌ ಕಾರಣಕ್ಕೆ ತಲಕಾಡನ್ನ ಇನ್ನಷ್ಟು ಅಭಿವೃದ್ಧಿಪಡಿಸಬೇಕಿದೆ. ಮುಂದಿನ ಪೀಳಿಗೆಗೆ ಕೊಂಡೊಯ್ಯಲು ಇಲ್ಲಿ ಅಭಿವೃದ್ಧಿ ಮಾಡಲು ತೀರ್ಮಾನ ಮಾಡಲಾಗಿದೆ. ಮೈಸೂರಿಗೆ ಬರುವ ಪ್ರವಾಸಿಗರು ಇಲ್ಲಿಗೂ ಸಹ ಬರುವಂತಾಗಬೇಕು. ಧಾರ್ಮಿಕ ಕೇಂದ್ರವಾಗಿ ಮಾತ್ರ ಅಲ್ಲದೇ ಪ್ರವಾಸಿ ತಾಣವಾಗಿ ಸಹ ಅಭಿವೃದ್ಧಿ ಆಗಬೇಕಿದೆ. ಮೈಸೂರು ಸರ್ಕ್ಯೂಟ್ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಚಿಂತನೆ ಮಾಡಲಾಗಿದೆ. ಆದ್ರೆ ಪೂರಕ ವ್ಯವಸ್ಥೆ ಇಲ್ಲ. ಈ ಹಿನ್ನೆಲೆಯಲ್ಲಿ ಪ್ರತಿವರ್ಷ ತಲಕಾಡು ಗಂಗರ ಉತ್ಸವ ನಡೆಸಲು  ನಿರ್ಧಾರ ಮಾಡಲಾಗಿದೆ. ಈ ವರ್ಷವೇ ದಸರಾ ವೇಳೆಗೆ ಗಂಗರ ಉತ್ಸವ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

12 ವರ್ಷಕ್ಕೊಮ್ಮೆ ಪಂಚಲಿಂಗ ದರ್ಶನ ಮಾಡಲಾಗುತ್ತಿದೆ. ಪ್ರತಿವರ್ಷ ಗಂಗರ ಉತ್ಸವ‌ ನಡೆಸಿದರೆ ಮೂಲ ಸೌಕರ್ಯ ಅಭಿವೃದ್ಧಿ ಆಗಲಿದೆ. ಈ ಬಗ್ಗೆ ವಿವಿಧ ಇಲಾಖೆಗಳ ಜೊತೆ ಚರ್ಚಿಸಿ ಅನುಮೋದನೆ ಪಡೆಯುತ್ತೇನೆ. ರಾಜ್ಯದಲ್ಲಿ ಸಾಕಷ್ಟು ಪ್ರವಾಸಿ ತಾಣವಿದ್ದರೂ ಶಾಲಾ ಮಕ್ಕಳಿಗೆ ಮೂಲಸೌಕರ್ಯ ಇಲ್ಲ. ನಮ್ಮ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸಭೆ ನಡೆಸಿ. ಮೈಸೂರು ಸೇರಿದಂತೆ ರಾಜ್ಯದ ಹತ್ತು ಕಡೆಗಳಲ್ಲಿ ಶಾಲಾ ಮಕ್ಕಳಿಗೆ ಮೂಲ ಸೌಕರ್ಯ ಕಲ್ಪಿಸಲು ಚಿಂತನೆ ಮಾಡಲಾಗಿದೆ. ಸರ್ಕಾರದಿಂದ ಉಚಿತ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸುತ್ತೇವೆ. ಈ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ. ವಿವಿಧ ಇಲಾಖೆಗಳ ಜೊತೆ ಚರ್ಚೆ ಮಾಡಿ ಅಂತಿಮ ರೂಪುರೇಷೆ ರಚಿಸಲಾಗುತ್ತದೆ ಎಂದು ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದರು.

15 ದಿನದಲ್ಲಿ ಬೆಂಗಳೂರಿನಲ್ಲಿ ಹೆಲಿಟೂರಿಸಂ ಪ್ರಾರಂಭ ಮಾಡಲಾಗುತ್ತದೆ.

15 ದಿನದಲ್ಲಿ ಬೆಂಗಳೂರಿನಲ್ಲಿ ಹೆಲಿಟೂರಿಸಂ ಪ್ರಾರಂಭ ಮಾಡಲಾಗುತ್ತದೆ. ಈ ಬಗ್ಗೆ ಪರಿಸರವಾದಿಗಳ ವಿರೋಧವಾಗಿದೆ. ಆದರೆ ವಿಮಾನ ನಿಲ್ದಾಣ ಬಳಕೆ ಮಾಡಿಕೊಂಡು ಪ್ರಾರಂಭ ಮಾಡುತ್ತೇವೆ. ಮೈಸೂರಿನಲ್ಲಿ ಹೆಲಿಟೂರಿಸಂ ಆದಷ್ಟು ಬೇಗ ಪ್ರಾರಂಭವಾಗುತ್ತೆ. ರೂಪುರೇಷೆಗಳನ್ನು ಬದಲಾವಣೆ ಮಾಡಿಕೊಂಡು ಮಾಡುತ್ತೇವೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು.

ಗೈಡ್ ಗಳ ಮನವಿಗೆ ಸಚಿವ ಸಿ.ಪಿ ಯೋಗೇಶ್ವರ್ ಸ್ಪಂದನೆ.

ಸಚಿವ ಸಿಪಿ ಯೋಗೇಶ್ವರ್ ಅವರನ್ನ ಭೇಟಿಯಾದ ಗೈಡ್ ಗಳು, ಮೈಸೂರು ಅರಮನೆ ಪ್ರವೇಶಕ್ಕೆ ಗೈಡ್ ಗಳು ಸಹ ಟಿಕೆಟ್ ಪಡೆಯಬೇಕಂಬ ವಿಚಾರಕ್ಕೆ ಸಂಬಂಧಿಸಿದಂತೆ ಮನವಿ ಸಲ್ಲಿಸಿದರು. ಈ ವೇಳೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಕರೆ ಮಾಡುವ ಮೂಲಕ ಗೈಡ್ ಗಳ ಮನವಿಗೆ ಸ್ಪಂದಿಸಿದದರು

Key words: Decision – hold -Gangara utsava-Talakadu-Minister- C.P. Yogeshwar