ಉದ್ಯಮಿಗಳಿಂದ 1ಲಕ್ಷಕೋಟಿ ಬಂಡವಾಳ ಹೂಡಿಕೆಗೆ ನಿರ್ಧಾರ – ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ…

ಹುಬ್ಬಳ್ಳಿ,ಫೆ,14,2020(www.justkannada.in): ಕಲ್ಯಾಣ ಕರ್ನಾಟಕ, ಈ ಭಾಗದಲ್ಲಿ  ಬಂಡವಾಳ ಹೂಡಿಕೆ ಮಾಡಲು ಉದ್ಯಮಿಗಳು ನಿರ್ಧರಿಸಿದ್ದಾರೆ. ನಾವು ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಉತ್ತರ ಕರ್ನಾಟಕದ ಬೆಳಗಾವಿ ಮತ್ತು ಕಲಬುರ್ಗಿ ವಿಭಾಗಗಳಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ದಿಮೆಗಳ ಸ್ಥಾಪನೆಯ ಬಹುನಿರೀಕ್ಷಿತ ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶಕ್ಕೆ ನಗರದ ಡೆನಿಸನ್ಸ್ ಹೋಟೆಲ್ ಸಭಾಂಗಣದಲ್ಲಿ ಚಾಲನೆ ಸಿಕ್ಕಿತ್ತು. ಸಿಎಂ ಬಿಎಸ್ ಯಡಿಯೂರಪ್ಪ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.  ಈ ವೇಳೆ ಕೇಂದ್ರ ಸಚಿವರಾದ ಡಿ.ವಿ ಸದಾನಂದಗೌಡ, ಪ್ರಹ್ಲಾದ್ ಜೋಶಿ, ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್  ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 700ಕ್ಕೂ ಹೆಚ್ಚು ಉದ್ಯಮಿಗಳು ಪಾಲ್ಗೊಂಡಿದ್ದು, ಸಚಿವರಾದ‌ ಪ್ರಹ್ಲಾದ್‌ ಜೋಶಿ, ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಗಣ್ಯ ಉದ್ಯಮಿಗಳನ್ನು ಖುದ್ದಾಗಿ ಸಮಾವೇಶಕ್ಕೆ ಬರಮಾಡಿಕೊಂಡರು.

ಚಾಲನೆ ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ನಿರೀಕ್ಷೆಗೂ ಮೀರಿ ಉದ್ಯಮಿಗಳು ಹೂಡಿಕೆ ಮಾಡಲು ನಿರ್ಧರಿಸಿದ್ದಾರೆ. ಸುಮಾರು 1 ಲಕ್ಷಕೋಟಿ ಬಂಡವಾಳ ಹೂಡಿಕೆಗೆ ನಿರ್ಧಾರ ಮಾಡಿದ್ದಾರೆ. ಕಲ್ಯಾಣ ಕರ್ನಾಟಕ, ಈ ಭಾಗದಲ್ಲಿ ಹೂಡಿಕೆಗೆ ಈಗಷ್ಟೆ ಒಡಂಬಡಿಕೆ ಮಾಡಿಕೊಂಡಿದ್ದಾರೆ. ಅವರಿಗೆ ಎಲ್ಲಾರೀತಿಯ ಸಹಕಾರ ನೀಡುತ್ತೇವೆ ಎಂದರು.

ರಾಜ್ಯದ ಮೇಲ ನಂಬಿಕೆಯಿಡಿ. ಸಹಕಾರ ನೀಡುತ್ತೇವೆ ಎಂದು ಉದ್ಯಮಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದರು.

Key words: Decision – invest- 1 trillion -CM BS Yeddyurappa -Invest Karnataka -Conference