ರಾಜ್ಯದಲ್ಲಿ 6 ರಿಂದ 8ನೇ ತರಗತಿ ಆರಂಭಕ್ಕೆ ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಧಾರ.

kannada t-shirts

ಬೆಂಗಳೂರು,ಆಗಸ್ಟ್,30,2021(www.justkannada.in):  ರಾಜ್ಯದಲ್ಲಿ 6ರಿಂದ 8ನೇ ತರಗತಿ ಶಾಲೆ ಆರಂಭಕ್ಕೆ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಸಿಎಂ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಆರ್.ಅಶೋಕ್, 6 ರಿಂದ 8ನೇ ತರಗತಿ ಆರಂಭಕ್ಕೆ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ವಾರದಲ್ಲಿ 5 ದಿನ ಮಾತ್ರ ತರಗತಿಗಳು ನಡೆಯಲಿವೆ.  ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ಇದ್ದರೇ ಮಾತ್ರ ಶಾಲೆ ಆರಂಭ ಮಾಡಲಾಗುತ್ತದೆ.  ಶೇ.50ರಷ್ಟು ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಅವಕಾಶವಿರುತ್ತದೆ ಎಂದರು.

ಇನ್ನು ಗಣೇಶೋತ್ಸವ ಆಚರಣಭೆ ಸಂಬಂಧ ಮತ್ತೊಂದು ಸಭೆ ನಡೆಸಲಾಗುತ್ತದೆ. ಸೆ.5 ರಂದು ಗಣೇಶೋತ್ಸವ ಆಯೋಜಕರ ಜತೆ ಸಭೆ ನಡೆಸಿ ಚರ್ಚಿಸಲಾಗುತ್ತದೆ. ನಂತರ ಈ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಆರ್.ಅಶೋಕ್ ತಿಳಿಸಿದರು.

Key words: Decision – meeting – beginning – 6th to 8th grade – State- Minister- R. Ashok.

website developers in mysore