ಮುರುಘಾ ಮಠಕ್ಕೆ ನೂತನ ಪೀಠಾಧ್ಯಕ್ಷ, ಆಡಳಿತಾಧಿಕಾರಿ ನೇಮಕಕ್ಕೆ ವಿಳಂಬವಾದರೆ ಕೋರ್ಟ್ ಮೊರೆ ಹೋಗಲು ನಿರ್ಣಯ

Promotion

ಬೆಂಗಳೂರು, ಡಿಸೆಂಬರ್ 04, 2022 (www.justkannada.in): ಮುರುಘಾ ಮಠಕ್ಕೆ ನೂತನ ಪೀಠಾಧ್ಯಕ್ಷ ಅಥವಾ ಆಡಳಿತಾಧಿಕಾರಿ ನೇಮಕಕ್ಕೆ ಸರ್ಕಾರ ವಿಳಂಬ ನೀತಿ ಮುಂದುವರಿಸಿದರೆ ನ್ಯಾಯಾಲಯದ ಮೆಟ್ಟಿಲೇರಲು ವೀರಶೈವ ಲಿಂಗಾಯತ ಸಮಾಜ ನಿರ್ಣಯ ಕೈಗೊಂಡಿದೆ.

ನಿಜಲಿಂಗಪ್ಪ ಸ್ಮಾರಕದಲ್ಲಿ ಮಾಜಿ ಸಚಿವ ಎಚ್‌. ಏಕಾಂತಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಮೂರು ನಿರ್ಣಯಗಳನ್ನು ಅನುಮೋದಿಸಿತು. ಸಭೆಯ ತೀರ್ಮಾನದ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆಯಲು ನಿರ್ಧರಿಸಲಾಗಿದೆ.

ನೂತನ ಪೀಠಾಧ್ಯಕ್ಷರು ಅಥವಾ ಆಡಳಿತಾಧಿಕಾರಿ ನೇಮಕ ಮಾಡುವಂತೆ ಅಕ್ಟೋಬರ್‌ 14ರಂದು ಕೋರಲಾಗಿತ್ತು. ಸರ್ಕಾರ ಈವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಒಂದು ವಾರ ಕಾದುನೋಡಿ ಮುಂದಿನ ಹೆಜ್ಜೆ ಇಡಲಾಗುವುದು’ ಎಂದು ಏಕಾಂತಯ್ಯ ಮಾಹಿತಿ ನೀಡಿದ್ದಾರೆ.