ನಾನು ಸಿಎಂ ಅಭ್ಯರ್ಥಿ ಎಂದು ಹೇಳಿಕೆ ನೀಡಿಲ್ಲ: ನನ್ನ ಹೇಳಿಕೆ ತಿರುಚಲಾಗಿದೆ- ಮಾಜಿ ಸಿಎಂ ಸಿದ್ಧರಾಮಯ್ಯ.

Promotion

ನವದೆಹಲಿ, ಏಪ್ರಿಲ್,4,2023(www.justkannada.in): ರಾಜ್ಯ  ವಿಧಾನಸಭೆ ಚುನಾವಣೆಗೆ ಈಗಾಗಲೇ 124 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್ 2ನೇ ಪಟ್ಟಿ ರಿಲೀಸ್ ಮಾಡಲು ಸಭೆ ನಡೆಸಿ ಚರ್ಚಿಸುತ್ತಿದೆ.

2ನೇ ಪಟ್ಟಿ ಸಂಬಂಧ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಗೂ ಒಂದು ದಿನ ಮೊದಲೇ ಸಿದ್ದರಾಮಯ್ಯ ಸಿಎಂ ಹುದ್ದೆ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಸಿಎಂ ಹುದ್ದೆ ಬಗ್ಗೆ ಖಾಸಗಿ ಚಾನಲ್ ಸಂದರ್ಶನವೊಂದರಲ್ಲಿ ಸಿದ‍್ಧರಾಮಯ್ಯ ಮಾತನಾಡಿದ್ದಾರೆ.  ತಮ್ಮ ಮತ್ತು ಡಿ.ಕೆ ಶಿವಕುಮಾರ್ ನಡುವೆ  ರೇಸ್ ಇರುವ ಕುರಿತು  ಮಾತನಾಡಿದ್ದರು ಎನ್ನಲಾಗಿತ್ತು.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿದ್ಧರಾಮಯ್ಯ, ನಾನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೆ ನೀಡಿಲ್ಲ. ನಾನು ಆ ರೀತಿ ಹೇಳಿಕೆ ನೀಡಿಲ್ಲ ನನ್ನ ಹೇಳೀಕೆಯನ್ನ ಕೆಲವರು ತಿರುಚಿದ್ದಾರೆ. ಪ್ರಜಾಭುಪ್ರಭುತ್ವ ವ್ಯವಸ್ಥೆಯಡಿಯಲ್ಲಿ ಸಿಎಂ ಆಯ್ಕೆ ಆಗಲಿದೆ.  ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾನ್ಯ ಅಂತ ಹೇಳಿದ್ದೆ ಎಂದು ಸ್ಪಷ್ಟನೆ ನೀಡಿದರು.

Key words: declared -cm –candidate-Former CM- Siddaramaiah.