ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖ: ಕೆಲ ರೂಟ್ ಗಳ ಶೇ. 10ರಷ್ಟು ಬಸ್ ಸಂಚಾರ ರದ್ದುಗೊಳಿಸಿದ ಬಿಎಂಟಿಸಿ…

kannada t-shirts

ಬೆಂಗಳೂರು,ಮಾ,14,2020(www.justkannada.in):  ಮಹಾಮಾರಿ ಕೋರೋನಾ ವೈರಸ್ ಇಡಿ ವಿಶ್ವವನ್ನೇ ತಲ್ಲಣಗೊಳಿಸಿದ್ದು ಕೊರೋನಾ ಸೋಂಕಿನ ಭೀತಿಗೆ ದೇಶದ ರಾಜ್ಯದ ಜನತೆ ತತ್ತರಿಸಿದ್ದಾರೆ. ಈ ನಡುವೆ ಕೊರೋನಾ ಎಫೆಕ್ಟ್ ನಿಂದಾಗಿ ಬೆಂಗಳೂರಿನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.

ಮಾರಕ ಕೊರೊನಾ ಸೋಂಕು  ಹರಡದಂತೆ ತಡೆಗಟ್ಟಲು ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಇಂದಿನಿಂದ ಒಂದು ವಾರದವರೆಗೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದ್ದು, ಸಾರ್ವಜನಿಕರು ಹೆಚ್ಚು ಸೇರುವ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಈ ಹಿನ್ನೆಲೆ ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿ ಇಂದು ಬೆಳಗ್ಗೆಯಿಂದ ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಯೂ ಇಳಿಮುಖವಾಗಿದೆ. ಮೆಜೆಸ್ಟಿಕ್ ನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ.

ಹೀಗಾಗಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿರುವ ರೂಟ್ ಗಳಲ್ಲಿ ಶೇ.10 ರಷ್ಟು ಬಸ್ ಗಳ ಸಂಚಾರವನ್ನ ಬಿಎಂಟಿಸಿ ರದ್ದುಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೊರೋನಾ ವೈರಸ್ ಆತಂಕ ಹಿನ್ನೆಲೆ  ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

Key words: Decline – passenger -some root- BMTC  cancels- 10 percent -bus

 

website developers in mysore