“ಬೀದಿ ನಾಯಿಗಳ ದಾಳಿಗೆ ಜಿಂಕೆ ಸಾವು”

ಮೈಸೂರು,ಫೆಬ್ರವರಿ,19,2021(www.justkannada.in)  : ಕಾಡಿನಿಂದ ನಾಡಿಗೆ ಬಂದಿದ್ದ ಜಿಂಕೆ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಜಿಂಕೆ ಸಾವನ್ನಪ್ಪಿದೆ.jk

ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಗೋವಿಂದೇಗೌಡ ಎಂಬುವವರ ಮನೆ ಬಳಿ ಈ ಘಟ‌ನೆ ನಡೆದಿದೆ.

ಕಾಡಿನಿಂದ ನಾಡಿಗೆ ಬಂದಿದ್ದ ಜಿಂಕೆ‌ಯನ್ನು ಕಂಡ ಬೀದಿ ನಾಯಿಗಳು ದಾಳಿ ನಡೆಸಿವೆ. ಈ ಸಂದರ್ಭ ಗ್ರಾಮಸ್ಥರು ನಾಯಿಗಳನ್ನು ಓಡಿಸಿ, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

Deer-death-street-dog-attack

ಮಾಹಿತಿ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವ ವೇಳೆಗೆ ಜಿಂಕೆ ಮೃತಪಟ್ಟಿದ್ದು, ಜಿಂಕೆಯ ಮೃತದೇಹವನ್ನು ಅರಣ್ಯ ಸಿಬ್ಬಂದಿ ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

key words : Deer-death-street-dog-attack