ಮಾನನಷ್ಟ ಮೊಕದ್ದಮೆ ಕೇಸ್: ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಕೋರ್ಟ್…

kannada t-shirts

ಮುಂಬೈ,ಜು,4,2019(www.justkannada.in): ಆರ್ ಎಸ್ ಎಸ್ ಕಾರ್ಯಕರ್ತರೊಬ್ಬರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮುಂಬೈ ಶಿವಡಿ ಕೋರ್ಟ್ ಬಿಗಿ ರಿಲೀಫ್ ನೀಡಿದೆ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರ್ ಎಸ್ ಎಸ್, ಬಿಜೆಪಿ ಭಾಗಿಯಾಗಿದ್ದಾರೆ ಎಂದು ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ಈ ಸಂಬಂಧ ಆರ್ ಎಸ್ ಎಸ್ ಕಾರ್ಯಕರ್ತರೊಬ್ಬರು ರಾಹುಲ್ ಗಾಂಧಿ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಪ್ರಕರಣ ಸಂಬಂಧ ಕೋರ್ಟ್ ಫೆಬ್ರವರಿಯಲ್ಲಿ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ರಾಹುಲ್ ಗಾಂಧಿ ಅವರು ಇಂದು ಮುಂಬೈನ ಶಿವಡಿ ಕೋರ್ಟ್ ಹಾಜರಾಗಿದ್ದರು. ಪ್ರಕರಣ ಸಂಬಂಧ ಇಂದು ತೀರ್ಪು ನೀಡಿರುವ ಕೋರ್ಟ್ ರಾಹುಲ್ ಗಾಂಧಿ ತಪ್ಪತಸ್ಥರಲ್ಲ ಎಂದು ಹೇಳಿಕೆ ನೀಡಿದೆ. ರಾಹುಲ್ ಗಾಂಧಿ ಅವರನ್ನ ಕೋರ್ಟ್ ಆರೋಪಮುಕ್ತಗೊಳಿಸಿದ್ದು ಈ ಮೂಲಕ ರಾಹುಲ್ ಗಾಂಧಿಗೆ ರಿಲೀಫ್ ಸಿಕ್ಕಂತಾಗಿದೆ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಸಲ್ಲಿಸಲಾಗಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಮುಂಬೈಯ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಈ ಮೂಲಕ ರಾಹುಲ್ ಗಾಂಧಿಗೆ ಕೇಸಿನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.

ಚುನಾವಣೆ ಸಂದರ್ಭದಲ್ಲಿ ಆಡಳಿತ ಪಕ್ಷದ ನಾಯಕರನ್ನು ಟೀಕಿಸುವಾಗ ರಾಹುಲ್ ಗಾಂಧಿಯವರು ಹೀಗೆ ಹೇಳಿದ್ದು, ಗೌರಿ ಲಂಕೇಶ್ ಹತ್ಯೆಗೆ ಬಿಜೆಪಿ-ಆರ್ ಎಸ್‌ಎಸ್ ಸಿದ್ದಾಂತಗಳು ಮತ್ತು ಅವುಗಳನ್ನು ಹಿಂಬಾಲಿಸುವವರು ಕಾರಣ ಎಂದು ಹೇಳಿದ್ದರಷ್ಟೆ ಹೊರತು ಇಂತವರೇ ಹತ್ಯೆಗೆ ಕಾರಣ ಎಂದು ಹೇಳಿಲ್ಲ. ಯಾವೊಬ್ಬ ವ್ಯಕ್ತಿಯ ಮೇಲೆ ನಿರ್ದಿಷ್ಟ ಆರೋಪ ಮಾಡಿಲ್ಲ, ಹೀಗಾಗಿ ಅವರ ವಿರುದ್ಧ ಕೇಸು ದಾಖಲಿಸುವ ಯಾವುದೇ ನಿರ್ದಿಷ್ಟ ಗುರುತರ ಸಾಕ್ಷಿಗಳಿಲ್ಲ ಎಂದು ಹೇಳಿ ನ್ಯಾಯಾಲಯ ಅವರನ್ನು ಆರೋಪ ಮುಕ್ತಗೊಳಿಸಿದೆ.

Key words: Defamation- case- Big Relief – Rahul Gandhi- Court

website developers in mysore