ಪ್ರಧಾನಿ ನರೇಂದ್ರ ಮೋದಿಗೆ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ತಿರುಗೇಟು

ಬೆಂಗಳೂರು, ಆಗಸ್ಟ್ 21, 2022 (www.justkannada.in): ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸವಾಲು ಹಾಕಿದ್ದಾರೆ.

ನಾನು ದೆಹಲಿಯಲ್ಲಿ ಮುಕ್ತವಾಗಿ ಓಡಾಡುತ್ತಿದ್ದೇನೆ, ಎಲ್ಲಿಗೆ ಬರಬೇಕು ಹೇಳಿ ಮೋದಿ ಜೀ’ ಎಂದು ತಿರುಗೇಟು ನೀಡಿದ್ದಾರೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಕೇಂದ್ರ ತನಿಖಾ ದಳ (ಸಿಬಿಐ) ಲುಕ್‌ ಔಟ್‌ ನೋಟಿಸ್‌ ಜಾರಿ ಮಾಡಿದೆ. ಇದಕ್ಕೆ ತಿರುಗೇಟು ನೀಡಿರುವ ಮನೀಶ್ ಸಿಸೋಡಿಯಾ, ಎಲ್ಲಿಗೆ ಬರಬೇಕು ಹೇಳಿ ಎಂದಿದ್ದಾರೆ.

ಲುಕ್‌ ಔಟ್‌ ನೋಟಿಸ್‌ ಜಾರಿ ಮಾಡಿರುವುದನ್ನು ಖಂಡಿಸಿ ಟ್ವಿಟರ್‌ನಲ್ಲಿ ಆಕ್ರೋಶ ಹೊರಹಾಕಿರುವ ಸಿಸೋಡಿಯಾ, ‘ನಮ್ಮ ಮೇಲೆ ನೀವು ಎಲ್ಲಾ ದಾಳಿಗಳನ್ನು (ಸಿಬಿಐ) ನಡೆಸಿದ್ದೀರಿ. ಆದರೆ, ನಮ್ಮ ಬಳಿ ಏನೂ ಪತ್ತೆಯಾಗಿಲ್ಲ. ಒಂದು ಪೈಸೆಯೂ ಹಣ ಸಿಕ್ಕಿಲ್ಲ. ಈಗ ಮನೀಶ್ ಸಿಸೋಡಿಯಾ ಸಿಗುತ್ತಿಲ್ಲ ಎಂದು ನನಗೆ ಲುಕ್‌ ಔಟ್ ನೋಟಿಸ್‌ ನೀಡಿದ್ದೀರಿ. ಇದೇನು ಗಿಮಿಕ್, ಮೋದಿ ಜೀ’ ಎಂದು ಪ್ರಶ್ನಿಸಿದ್ದಾರೆ.