ನಿಮ್ಮನ್ನ ಸಿಎಂ ಮಾಡ್ತೀವಿ 2500 ಕೋಟಿ ಕೊಡಿ ಎಂದು ದೆಹಲಿಯಿಂದ ಬಂದು ಕೇಳಿದ್ರು- ಹೊಸ ಬಾಂಬ್ ಸಿಡಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.

Promotion

ಬೆಳಗಾವಿ,ಮೇ,6,2022(www.justkannada.in): ದೆಹಲಿಯಿಂದ ಬಂದ ಕೆಲವರು ಎರಡೂವರೆ ಸಾವಿರ ಕೋಟಿ ನೀಡಿ ಸಿಎಂ ಮಾಡ್ತೀವಿ ಅಂದಿದ್ರು. ರಾಜಕಾರಣದಲ್ಲಿ ಯಾರೂ ಅಲ್ಲಿ ಇಲ್ಲಿ ಹೋಗಿ ಹಾಳಾಗಬೇಡಿ. ನಿಮಗೆ ಟಿಕೆಟ್ ಕೊಡಿಸುತ್ತೇವೆ, ದೆಹಲಿ ಕರೆದುಕೊಂಡು ಹೋಗ್ತೀವಿ. ಸೋನಿಯಾ ಗಾಂಧಿ ಭೇಟಿ ಮಾಡಿಸ್ತೀವಿ, ಜೆ‌.ಪಿ.ನಡ್ಡಾರನ್ನ ಭೇಟಿ ಮಾಡಿಸ್ತೀವಿ ಅಂತಾರೆ ಎಂದು ಬಿಜೆಪಿ ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೊಸಬಾಂಬ್ ಸಿಡಿಸಿದ್ದಾರೆ.

ಬೆಳಗಾವಿ ಜಿಲ್ಲೆ ರಾಯಭಾಗದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ದೆಹಲಿಯಿಂದ ಒಂದಿಷ್ಟು ಜನ ನನ್ನ ಬಳಿಯೂ ಬಂದಿದ್ದರು. ನಿಮ್ಮನ್ನು ಸಿಎಂ ಮಾಡ್ತೀವಿ 2500 ಕೋಟಿ ಸಜ್ಜ ಮಾಡಿ ಇಡ್ರಿ ಅಂದ್ರು. ಆಗ ನಾನು 2500 ಕೋಟಿ ಅಂದ್ರೆ ಏನ್ ಅಂತಾ ತಿಳಿದಿರಿ ಅಂದೆ. ಆ ಎರಡೂವರೆ ಸಾವಿರ ಕೋಟಿ ಹೆಂಗ್ ಇಡೋದು. ಏನು ಕೋಣೆಯಲ್ಲಿ ಇಡೋದೋ? ಗೋದಾಮಿನಲ್ಲಿ ಇಡೋದೋ? ಹಂಗ ಟಿಕೆಟ್ ಕೊಡ್ತೀನಿ ಅಂತಾ ರಾಜಕಾರಣದಲ್ಲಿ ಎಲ್ಲಾ ಕಡೆ ಮೋಸ ಮಾಡ್ತಾರೆ ಎಂದು ಯತ್ನಾಳ್ ಹೇಳಿಕೆ ನೀಡಿದ್ದಾರೆ.

ನಾನು ವಾಜಪೇಯಿಯವರ ಕೈಯಲ್ಲಿ ಕೆಲಸ ಮಾಡಿದವನು. ಎಲ್.ಕೆ ಅಡ್ವಾಣಿ, ರಾಜನಾಥ್ ಸಿಂಗ್‌, ಅರುಣ್ ಜೇಟ್ಲಿ ನನ್ನ ಬಸನಗೌಡ ಅಂತಾ ಹೆಸರು ಹೇಳಿ ಕರಿತಿದ್ರು. ಅಂತಾ ವ್ಯಕ್ತಿಗೆ ಹೇಳ್ತಾರೆ ಎರಡೂಸಾವಿರ ಕೋಟಿ ಸಜ್ಜ ಮಾಡಿ ಸಿಎಂ ಮಾಡ್ತೀವಿ ಅಂತಾರೆ. ನಡ್ಡಾರ ಮನೆಗೆ ಕರೆದುಕೊಂಡು ಹೋಗ್ತೀವಿ, ಅಮಿತ್ ಶಾ ಮನೆಗೆ ಕರೆದುಕೊಂಡು ಹೋಗ್ತೀವಿ ಅಂತಾ ಹಿಂಗಿಲ್ಲಾ  ಹೇಳಿ ಮಾಸ ಮಾಡ್ತಾರೆ. ರಾಜಕಾರಣದಲ್ಲಿ ಯಾರೂ ಅಲ್ಲಿ ಇಲ್ಲಿ ಹೋಗಿ ಹಾಳಾಗಬೇಡಿ ಎಂದು ಯತ್ನಾಳ್ ಹೇಳಿದರು.

Key words: Delhi – give – CM – 2500 crores-New Bomb-MLA-Basanagowda patil yatnal

ENGLISH SUMMARY…

Some people from Delhi had asked me to arrange Rs.2500 crores and I will become the CM: New bomb from MLA Basanagouda Patil Yatnal
Belagavi, May 6, 2022 (www.justkannada.in): “A few people who had come from Delhi had told me that I would be made the Chief Minister in return for Rs. 2,500 crores. Please don’t go anywhere in politics and destroy yourself. People will approach you saying that they will take you to Delhi, help you get the ticket, help you meet Sonia Gandhi, J.P. Nadda, etc., etc.,” said BJP MLA Basanagouda Patil Yatnal.
Speaking at Raybagh in Belagavi today, he said, “a few people who had come from Delhi had met me. Arrange Rs.2,500 crore, we will make you the Chief Minister they said. I told them, do you know how much is Rs. 2,500 crores? Where should I store it? In which room can I store it? which godown? People will try to cheat you stating that they will help you to get a ticket, etc.,” he alleged.
“I worked under former PM Vajpayee and L.K. Advani. Leaders like Rajnath Singh, and Arun Jaitely used to call me by my name. Today they say that I will be made a CM if I arrange Rs.2,500 crores. I request all not to fall prey to such cheating words,” he added.
Keywords: BJP MLA/ Basanagouda Patil Yatnal/ Rs.2,500 crore/ Chief Minister