ದೆಹಲಿ ಹಿಂಸಾಚಾರ: ಕೇಂದ್ರಗೃಹಸಚಿವರನ್ನ ಬದಲಾಯಿಸುವಂತೆ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ  ಕಾಂಗ್ರೆಸ್ ನಿಯೋಗ…  

ನವದೆಹಲಿ,ಫೆ,27,2020(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆ  ವಿಚಾರದಲ್ಲಿ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರದ ವೈಪಲ್ಯವೇ ಕಾರಣ. ಹೀಗಾಗಿ ಕೇಂದ್ರಗೃಹಸಚಿವರನ್ನ ಬದಲಾವಣೆ ಮಾಡುವಂತೆ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ್ದೇವೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದ ನಿಯೋಗ ಇಂದು ರಾಷ್ಟ್ರಪತಿ ಅವರನ್ನ ಭೇಟಿಯಾಗಿ ಕೇಂದ್ರ ಸರ್ಕಾರದ  ವಿರುದ್ದ  ದೂರು ಸಲ್ಲಿಸಿತು. ಈ ವೇಳೆ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನಖರ್ಗೆ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ದೆಹಲಿಯ ಈಶಾನ್ಯ ಭಾಗದಲ್ಲಿ ಕಳೆದ ನಾಲ್ಕು ದಿನಗಳಿಂದ ಹಿಂಸಾಚಾರ ನಡೆಯುತ್ತಿದೆ. ಅಗತ್ಯ ಕ್ರಮ ಕೈಗೊಳ್ಳದ ಹಿನ್ನೆಲೆ ಈ ಗಲಭೆ ನಡೆದಿದೆ. ಇದರಿಂದಾಗಿ ಸಾಕಷ್ಟು ನಷ್ಟ ಉಂಟಾಗಿದೆ.  ದೆಹಲಿಯಲ್ಲಿ ನಡೆದಿರುವ ಘಟನೆ ಬಗ್ಗೆ ಕೇಂದ್ರಕ್ಕೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದರು.

ಇನ್ನು ದೆಹಲಿ ಹಿಂಸಾಚಾರ ತಡೆಯುವಲ್ಲಿ ಪೊಲೀಸರು ಮತ್ತು ಕೇಂದ್ರ ಗೃಹ ಸಚಿವರು ವಿಫಲರಾಗಿದ್ದಾರೆ. ಹೀಗಾಗಿ ಕೇಂದ್ರ ಗೃಹ ಸಚಿವರನ್ನ ಬದಲಾವಣೆ ಮಾಡುವಂತೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದೇವೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

Key words:  Delhi Violence – Congress delegation- appeals -President –change- Union Home Minister

….