ಕಾವೇರಿ ನದಿ ವಿವಾದ ಬಗೆಹರಿಸುವಂತೆ ಆಗ್ರಹ:  ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ಕರವೇ

Promotion

ನವದೆಹಲಿ, ಅಕ್ಟೋಬರ್, 18,2023(www.justkannada.in): ಕಾವೇರಿ ನದಿ ನೀರು ವಿವಾದ ಬಗೆಹರಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ಕೇಂದ್ರ ಸಚಿವರಿಗೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರವೇ ಕಾರ್ಯಕರ್ತರು ದೆಹಲಿ ಚಲೋ ನಡೆಸಿದರು.  ನಂತರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಸಚಿವ ಗಜೇಂದ್ರ ಸಿಂಗ್ ಶೇಖವತ್​ ಭೇಟಿಯಾಗಿ ಕಾವೇರಿ ನದಿ ನೀರು ವಿವಾದ ಬಗೆಹರಿಸುವಂತೆ ಮನವಿ ಸಲ್ಲಿಸಿದರು. ಅಲ್ಲದೆ ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆ ನೀವು ಸಹಾಯ ಮಾಡಬೇಕು ಎಂದು ಮನವಿ ಮಾಡಿದರು.

ಅಕ್ಟೋಬರ 16 ರಿಂದ ಅಕ್ಟೋಬರ್ 31 ರವರೆಗೆ ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ  ಕಾವೇರಿ ನೀರು ನಿರ್ವಹಣಾ ಸಮಿತಿ ಸೂಚನೆ ನೀಡಿದ್ದು,  ಈ  ಆದೇಶವನ್ನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿಹಿಡಿದಿತ್ತು.

Key words: Demand – resolve – Kaveri rive- dispute-Karave- Union Minister