ಸುರಕ್ಷಾ ಆ್ಯಪ್ ಗೆ ಬೇಡಿಕೆ ಹೆಚ್ಚಾಗಿದೆ- ಪಶುವೈದ್ಯೆ ಅತ್ಯಾಚಾರ ಆರೋಪಿಗಳ ಎನ್ ಕೌಂಟರ್ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್‍ ರಾವ್ ಹೇಳಿದ್ದೇನು ಗೊತ್ತೆ…

ಬೆಂಗಳೂರು, ಡಿ.6,2019(www.justkannada.in): ಬೆಂಗಳೂರಿನಲ್ಲಿ ಸ್ತ್ರಿಯರ ಸುರಕ್ಷಾ ಆ್ಯಪ್ ಗೆ ಬೇಡಿಕೆ ಹೆಚ್ಚಾಗಿದೆ. ಬೆಂಗಳೂರಿಗರ ರಕ್ಷಣೆಗೆ ಸುರಕ್ಷಾ ಆ್ಯಪ್ ಬಳಸುವಂತೆ  ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್  ಮನವಿ ಮಾಡಿದ್ದಾರೆ.

ಹೈದರಾಬಾದ್‍ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಗಳನ್ನ ಎನ್ ಕೌಂಟರ್ ಮಾಡಿದ ವಿಚಾರ ಕುರಿತು ಮಾತನಾಡಿದ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್,   ದುಷ್ಕರ್ಮಿಗಳನ್ನ ಎನ್‍ಕೌಂಟರ್ ಮಾಡಿದ್ದು ಸರಿಯಾದ ನಿರ್ಧಾರವಾಗಿದೆ. ರಿಕ್ರಿಯೇಷನ್ ಮಾಡುವ ವೇಳೆ ಎನ್ ಕೌಂಟರ್ ನಡೆದಿದೆ. ಇಂತಹ ಸಂದರ್ಭದಲ್ಲಿ ಪೊಲೀಸರನ್ನು ಎಲ್ಲರೂ ಬೆಂಬಲಿಸಬೇಕೆಂದು ತಿಳಿಸಿದರು.

ಪರಿಶೀಲನೆ ಮಾಡಲು ಸ್ಥಳಕ್ಕೆ ಕರೆದುಕೊಂಡು ಹೋಗಿದ್ದ ವೇಳೆ  ಪೊಲೀಸರ ಮೇಲೆ ಆರೋಪಿಗಳು ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಪ್ರಯತ್ನ ನಡೆಸಿದ್ದಾರೆ. ಈ ಸಮಯದಲ್ಲಿ ಪೊಲೀಸರು ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ. ತೆಲಂಗಾಣ ಪೊಲೀಸರು ಸರಿಯಾದ ಕೆಲಸ ಮಾಡಿದ್ದಾರೆ ವಿಶ್ವನಾಥ್ ಸಜ್ಜನರ್ ಸಾಕಷ್ಟು ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು ಪೊಲೀಸರು ರೂಪಿಸಿರುವ ಸುರಕ್ಷಾ ಆ್ಯಪ್ ಬೇಡಿಕೆ ಹೆಚ್ಚಾಗಿದೆ. ಈ ಮೊದಲು 40 ಸಾವಿರ ಮಂದಿ ಡೌನ್‍ಲೋಡ್ ಮಾಡಿಕೊಂಡಿದ್ದರು. ಹೈದರಾಬಾದ್ ಘಟನೆ ನಂತರ 1.90ಲಕ್ಷ ಡೌನಲೋಡ್ ಆಗಿದೆ. ಮಹಿಳೆಯರ ರಕ್ಷಣೆ ಮತ್ತು ಬೆಂಗಳೂರನ್ನು ಸುರಕ್ಷಿತ ತಾಣವಾಗಿಸಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು.

Key words: Demand – security app –  Bengaluru City -Police Commissioner -Bhaskar Rao