ಡಿನೋಟಿಫಿಕೇಷನ್ ಪ್ರಕರಣ: ಮಾಜಿ ಸಿಎಂ ಬಿಎಸ್ ವೈಗೆ ಬಿಗ್ ರಿಲೀಫ್.

Promotion

ನವದೆಹಲಿ,ಜುಲೈ,22,2022(www.justkannada.in):  ಪುತ್ರನಿಗಾಗಿ ಶಿಕಾರಿಪುರ ಕ್ಷೇತ್ರ ತ್ಯಾಗ ಮಾಡುವುದಾಗಿ ಘೋಷಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಇದೀಗ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ರಿಲೀಫ್ ಸಿಕ್ಕಿದೆ.

ಹೌದು  ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. 2006-07ರ ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂರಪ್ಪ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಮಾಜಿ ಸಿಎಂ ಯಡಿಯೂರಪ್ಪ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಈ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,  ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿ ಆದೇಶ ನೀಡಿದೆ. ಈ ಮೂಲಕ  ಬಿಎಸ್ ವೈಗೆ ಬಿಗ್ ರಿಲೀಫ್ ಸಿಕ್ಕಿದೆ.

Key words: Denotification –case-Big relief -former CM -BS Yeddyurappa-supreme court