“ಭಕ್ತಿಭಂಡಾರಿ ಬಸವಣ್ಣ ಸೇರಿದಂತೆ ಐದು ಕೃತಿಗಳ ಲೋಕಾರ್ಪಣೆಗೊಳಿಸಿದ ಸಚಿವ ಅರವಿಂದ್ ಲಿಂಬಾವಳಿ”

ಮೈಸೂರು,ಏಪ್ರಿಲ್,10,2021 :  ಮೃತ್ಯುಂಜಯ ರುಮಾಲೆ ಅವರ ಸ್ವತಂತ್ರ ಸಿದ್ಧಲಿಂಗೇಶ್ವರರು, ಎಂ.ಆರ್.ಶ್ರೀನಿವಾಸಮೂರ್ತಿಯವರ ಭಕ್ತಿಭಂಡಾರಿ ಬಸವಣ್ಣ ಹಾಗೂ ಎಸ್.ಎಂ‌.ಅಂಗಡಿಯವರ. ಬಸವ ದರ್ಶನ ಸೇರಿದಂತೆ ಐದು ಕೃತಿಗಳನ್ನು ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಚಿವ ಅರವಿಂದ್ ಲಿಂಬಾವಳಿ ಬಿಡುಗಡೆ ಮಾಡಿದರು.Sanskrit Vivia,8th event,30 people,Ph.D,43graduates,M.Phil,Awarded 

ಜೆ.ಎಸ್.ಎಸ್ ಮಹಿಳಾ ಕಾಲೇಜಿನಲ್ಲಿ ಸುತ್ತೂರು ಜಗದ್ಗುರು ವೀರಸಿಂಹಾಸನ ಮಹಾ ಸಂಸ್ಥಾನಮಠ ಹಾಗೂ ಜೆಎಸ್ಎಸ್ ಮಹಾವಿದ್ಯಾಪೀಠ ಆಶ್ರಯದಲ್ಲಿ ಐದು ಕೃತಿಗಳ ಲೋಕಾರ್ಪಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೃತಿ ಲೋಕಾರ್ಪಣೆ ಮಾಡಲಾಯಿತು.

ಶ್ರೀ ಮಹಾಂತಪ್ಪ ನಂದೂರುರವರಿಗೆ ಶಿವರಾತ್ರೀಶ್ವರ ಪ್ರಶಸ್ತಿ, ಲೇಖಕಿ ರಾಧಾಮಲ್ಲಪ್ಪಗೆ ಎಂ.ವೀರಪ್ಪ ದತ್ತಿ ಪ್ರಶಸ್ತಿ ಹಾಗೂ ಈಶ್ವರ ಎನ್‌.ಜೋಶಿಯವರಿಗೆ ಡಿ.ವಿ.ಹಾಲಭಾವಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ಭಕ್ತಿಭಂಡಾರಿ ಬಸವಣ್ಣನವರು, ಬಸವದರ್ಶನ, ಸ್ವತಂತ್ರ ಸಿದ್ದಲಿಂಗೇಶ್ವರ ರು, ಹಾರ್ಟ್ ಟು ಹಾರ್ಟ್ ಮತ್ತು ಸುತ್ತೂರು ಶ್ರೀಮಠದ ಗ್ರಂಥಾಲಯ, ಅರಿವೆ ಪ್ರಮಾಣು ಕೃತಿ ರಚನೆ ಮಾಡಿದ ಶ್ರೀ ಮಹಂತಪ್ಪ ನಂದೂರ ಅವರಿಗೆ 2019ನೇ ಸಾಲಿನ ಶ್ರೀ ಶಿವರಾತ್ರೀಶ್ವರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದಲ್ಲದೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪ್ರಶಸ್ತಿಗೆ ಭಾಜನರಾದ ಕೆ.ಎಸ್. ಮಹಾದೇವಸ್ವಾಮಿ ಪೊನ್ನಾಚಿ ಅವರಿಗೆ ಸನ್ಮಾನ ಮಾಡಿ ಅಭಿನಂದಿಸಲಾಯಿತು.

ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀ ಹಾಗೂ ಸಿದ್ದೇಶ್ವರ ಶ್ರೀಗಳ ಸಾನಿಧ್ಯವಹಿಸಿದ್ದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗೊ.ರು ಚನ್ನಬಸಪ್ಪ ಅಧ್ಯಕ್ಷತೆವಹಿಸಿದ್ದರು. Devotional,Basavanna,Including,Five works,Localized,Minister,Arvind Limbavali 

ಸಮಾರಂಭದಲ್ಲಿ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಹಾಗೂ ನಿರಾಭಾರಿ ಚರಮೂರ್ತಿ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಗೊ.ರು .ಚನ್ನಬಸಪ್ಪ, ಶಾಸಕ ನಾಗೇಂದ್ರ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್.ನಂದೀಶ್ ಹಂಚೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ. ವಸಂತಕುಮಾರ್ ಸೇರಿದಂತೆ ವಿವಿಧ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

key words : Devotional-Basavanna-Including-Five works-Localized-Minister-
Arvind Limbavali