ಟೆಂಪೋ ಡಿಕ್ಕಿ: ಕಾರಿನಲ್ಲಿದ್ದ ನಾಲ್ವರು ದುರ್ಮರಣ…

Promotion

ಧಾರವಾಡ, ಜ,14,2020(www.justkannada.in):  ಟೆಂಪೋ ಮತ್ತು ಕಾರ್ ನಡುವೆ  ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರು ಘಟನೆ  ಧಾರವಾಡದಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ರುದ್ರಪ್ಪ (65), ಮಂಜುನಾಥ್(40), ಈರಮ್ಮ(62)  ಸೇರಿ ನಾಲ್ವರು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೆಳಗಾವಿಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಟೆಂಪೋ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ.

ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು  ಗಾಯಾಳುಗಳನ್ನು ಧಾರವಾಡದ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಈ  ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ  ಪ್ರಕರಣ ದಾಖಲಾಗಿದೆ.

Key words: dharawad- Tempo collision-  car-four –death