ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿಯಿಂದ ಧೋನಿ ಔಟ್ !

Promotion

ನವದೆಹಲಿ, ಜನವರಿ 17, 2019 (www.justkannada.in): ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿಯನ್ನು ಪ್ರಕಟಿಸಿದ್ದು, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರನ್ನು ಕೈಬಿಡಲಾಗಿದೆ.

ಧೋನಿ ಕಳೆದ ವರ್ಷದ ಗುತ್ತಿಗೆ ಪಟ್ಟಿಯಲ್ಲಿ ‘ಎ’ ಶ್ರೇಣಿಯಲ್ಲಿದ್ದರು. 2014ರಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಧೋನಿ, 2017ರಲ್ಲಿ ಚುಟುಕು ಕ್ರಿಕೆಟ್‌ ನಾಯಕತ್ವ ತೊರೆದಿದ್ದರು.

ಮಾತ್ರವಲ್ಲದೆ ಕಳೆದ ವರ್ಷ ಇಂಗ್ಲೆಂಡ್‌ನಲ್ಲಿ ನಡೆದ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಸೋಲು ಕಂಡ ಬಳಿಕ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ.  ಕ್ರಿಕೆಟ್‌ನಲ್ಲಿ ಮುಂದುವರಿಯುವ ಬಗ್ಗೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಅವರನ್ನು ಪಟ್ಟಿಯಿಂದ ತೆಗೆಯಲಾಗಿದೆ.