ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಹುಟ್ಟುಹಬ್ಬ: ಮೈಸೂರಿನಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ…

Promotion

ಮೈಸೂರು, ಆಗಸ್ಟ್, 29, 2020(www.justkannada.in) ; ಇಂದು ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಹುಟ್ಟುಹಬ್ಬ ಹಿನ್ನೆಲೆ ಮೈಸೂರಿನಲ್ಲಿ ಜಿಲ್ಲಾಡಳಿತ ಹಾಗೂ ಕ್ರೀಡಾ ಇಲಾಖೆಯಿಂದ ಧ್ಯಾಮ್ ಚಂದ್ ಹುಟ್ಟುಹಬ್ಬ ಆಚರಣೆ ಮಾಡಲಾಯಿತು.

ಚಾಮುಂಡಿವಿಹಾರದ ಒಳಕ್ರೀಡಾಂಗಣದಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿ, ಮೇಜರ್ ಧ್ಯಾನ್‍ಚಂದ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಧ್ಯಾನ್ ಚಂದ್ ಜಯಂತಿ ಅಂಗವಾಗಿ ಕ್ರೀಡಾ ಪತ್ರಿಕಾ ವರದಿಗಾರ ಆಂದೋಲನ ದಿನೇಶ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ ಸೇರಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

key words ; Dhyan Chand-Jayanti-achievers -mysore- minister -ST soma shekar