ಕಾಂಗ್ರೆಸ್ ನಿಂದ ದಿನೇಶ್ ಗೂಳಿಗೌಡ ಸ್ಪರ್ಧೆ ವಿಚಾರ:  ನಾನು ಹಲ್ಕಟ್ ರಾಜಕಾರಣ ಮಾಡಲ್ಲ ಎಂದ ಸಚಿವ ಎಸ್.ಟಿ ಸೋಮಶೇಖರ್.

kannada t-shirts

ಮೈಸೂರು,ನವೆಂಬರ್,23,2021(www.justkannada.in):  ತನ್ನ ಆಪ್ತರಾಗಿದ್ಧ ದಿನೇಶ್ ಗೂಳಿಗೌಡ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್. ನಾನು ಅಲ್ಲಿದಿದ್ದುಕೊಂಡು ಇಲ್ಲಿಗೆ, ಇಲ್ಲಿದ್ದುಕೊಂಡು ಅಲ್ಲಿಗೆ ಅನುಕೂಲ ಮಾಡಿಕೊಡುವ ಪ್ರಶ್ನೆ ಇಲ್ಲ. ನಾನು ಹಲ್ಕಟ್ ರಾಜಕಾರಣ ಮಾಡಲ್ಲ ಎಂದಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಈ ಹಿಂದೆ ಕಾಂಗ್ರೆಸ್ ನಲ್ಲಿ ಇದ್ದೆ. ಆಗ ಆ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡಿದ್ದೇನೆ. ಈಗ ಬಿಜೆಪಿ ಸರ್ಕಾರದಲ್ಲಿ ನಿಷ್ಟೆಯಿಂದ ಕೆಲಸ ಮಾಡುತ್ತಿದ್ದೇನೆ. ಅಲ್ಲಿದಿದ್ದುಕೊಂಡು ಇಲ್ಲಿಗೆ, ಇಲ್ಲಿದ್ದುಕೊಂಡು ಅಲ್ಲಿಗೆ ಅನುಕೂಲ ಮಾಡಿಕೊಡುವ ಪ್ರಶ್ನೆ ಇಲ್ಲ. ಅಂತ ಹೇಯ ಕೆಲಸವನ್ನೂ ನಾನು ಯಾವತ್ತೂ ಮಾಡಲ್ಲ ಎಂದರು.

ದಿನೇಶ್ ಗೂಳಿಗೌಡ ನನ್ನ ಜೊತೆ ಇದ್ದ. ಎಂಟು ದಿನಗಳ ಹಿಂದೆ ನನ್ನ ಬಳಿ ಬಂದು ಕಾಂಗ್ರೆಸ್ ಟಿಕೆಟ್ ಪ್ರಯತ್ನ ಮಾಡುತ್ತಿರುವುದಾಗಿ ಹೇಳಿದ. ನಾನು ಏನು ಮಾತನಾಡಲಿಲ್ಲ. ಮರುದಿನವೇ ವಿಶೇಷ ಕರ್ತವ್ಯಧಿಕಾರಿ ಹುದ್ದೆಯಿಂದ ತೆಗದುಹಾಕಿದ್ದೇನೆ‌. ನನಗೂ ಅವರಿಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಮೈಸೂರು ಚಾಮರಾಜನಗರ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ 3 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯತಿ ಸದಸ್ಯರಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಹೊಸಬರಾಗಿದ್ದಾರೆ‌. ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಕಳೆದ ಚುನಾವಣೆಯಲ್ಲಿ ಸೋತ ಬಳಿಕವೂ ಎಲ್ಲ ಗ್ರಾಮ ಪಂಚಾಯತಿ ಸದಸ್ಯರ ಜೊತೆ ಸಂಪರ್ಕದಲ್ಲಿದ್ದಾರೆ. ರಘು ಅವರ ಗೆಲುವಿಗಾಗಿ ಈಗಾಗಲೇ ರಣತಂತ್ರ ಮಾಡಿದ್ದೇವೆ. ಕಾಂಗ್ರೆಸ್ ಜೆಡಿಎಸ್ ನವರು ಏನು ಬೇಕಾದರೂ ಮಾಡಲಿ. ಈ ಬಾರಿ ನೂರಕ್ಕೆ ನೂರರಷ್ಟು ರಘು ಕೌಟಿಲ್ಯ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಪಕ್ಷ ಗ್ರಾಮ ಪಂಚಾಯತಿ ಸದಸ್ಯರ ಅಧಿಕಾರ ಮೊಟಕು ಮಾಡಿಲ್ಲ. ಎಲ್ಲ ಸಮುದಾಯದವರಿಗೂ ಅಧಿಕಾರ ಸಿಗಬೇಕೆಂಬ ಉದ್ದೇಶದಿಂದ ಗ್ರಾಮ ಪಂಚಾಯತಿ ಸದಸ್ಯರ ಅಧ್ಯಕ್ಷ ಸ್ಥಾನದ ಅವಧಿಯನ್ನು ಎರಡುವರೆ ವರ್ಷಕ್ಕೆ ಸೀಮಿತಗೊಳಿಸಲಾಗಿದೆ. ಇದರಲ್ಲಿ ಯಾವುದೇ ದುರುದ್ದೇಶವಿಲ್ಲ ಎಂದು ಸಚಿವ ಎಸ್ ಟಿ ಸೋಮಶೇಖರ್  ನುಡಿದರು.

Key words: Dinesh guligowda- contest – Congress-Minister- ST Somashekhar.

website developers in mysore