ಸಹಾಯಕ ಕೃಷಿ ಅಧಿಕಾರಿಗಳಿಗೆ ನೇರ ನೇಮಕಾತಿ- ಸಚಿವ ಬಿಸಿ ಪಾಟೀಲ್.

Promotion

 

ಬೆಂಗಳೂರು,ಮೇ,18,2022(www.justkannada.in): ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಕಳೆದ ಜನವರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲು ಒಪ್ಪಿಗೆ ನೀಡುವಂತೆ ಸಚಿವರು ಆರ್ಥಿಕ ಇಲಾಖೆಗೆ ಮನವಿ ಮಾಡಿದ್ದರು.ಅದರಂತೆ ಆರ್ಥಿಕ ಇಲಾಖೆ ಈಗ‌ ಒಪ್ಪಿಗೆ ಸೂಚಿಸಿದೆ.

300 ಹುದ್ದೆಗಳನ್ನು ಕರ್ನಾಟಕ ಕೃಷಿ ಸೇವೆಗಳು ( ವೃಂದ ಮತ್ತು ನೇಮಕಾತಿ ) ನಿಯಮಗಳು , 2021 ರಲ್ಲಿ ನಿಗದಿಪಡಿಸಿರುವ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿಯಮಾನುಸಾರ ಕೂಡಲೇ ಅಗತ್ಯ ಕ್ರಮಕೈಗೊಳ್ಳುವಂತೆ  ಕೃಷಿ ಇಲಾಖೆ  (ಸೇವೆಗಳು) ಸರ್ಕಾರದ ಅಧೀನ ಕಾರ್ಯದರ್ಶಿ  ಜೋನ್ ಪುಕಾಶ್ ರೋಡ್ರಿಗಸ್ ಅವರು ಕೃಷಿ ಇಲಾಖೆ ಆಯುಕ್ತರಿಗೆ  ನಿರ್ದೇಶಿಸಿರುವುದಾಗಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.

ಕೃಷಿ ಪದವೀಧರರು 85%, ಉಳಿದ 15%  ಪೋಸ್ಟ್‌ ಗಳನ್ನು ಬಿ.ಟೆಕ್ (ಕೃಷಿ ಎಂಜಿನಿಯರಿಂಗ್) ಅಥವಾ ಬಿ.ಟೆಕ್ (ಆಹಾರ    ತಂತ್ರಜ್ಞಾನ/ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ ಬಯೋಟೆಕ್ನಾಲಜಿ ಹೊಂದಿರುವವರು ಅರ್ಹರಿರುತ್ತಾರೆ.

Key words: Direct recruitment – Assistant –Agricultural-Officers- Minister -BC Patil.