ನಿರ್ದೇಶಕ ಪವನ್ ಕುಮಾರ್’ಗೆ ಕೊರೊನಾ ಸೋಂಕು ದೃಢ

Promotion

ಬೆಂಗಳೂರು, ಆಗಸ್ಟ್ 18, 2021 (www.justkannada.in): ದ್ವಿತ್ವ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ನಿರ್ದೇಶಕ ಪವನ್ ಕುಮಾರ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಲೂಸಿಯಾ ಸಿನಿಮಾ ಖ್ಯಾತಿಯ ನಿರ್ದೇಶಕ ಪವನ್ ಕುಮಾರ್ ಕೊರೋನಾ ಸೋಂಕಿಗೆ ತುತ್ತುದ್ದಾರೆ. ಈ ವಿಷಯವನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಎಕ್ಸ್ ರೇ ಫೋಟೋ ಪೋಸ್ಟ್ ಮಾಡಿರುವ ಪವನ್ ಕೊರೋನಾ ದೃಢಪಟ್ಟಿರುವ ಮಾಹಿತಿ ನೀಡಿದ್ದಾರೆ. ಮನೆಯಲ್ಲಿಯೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.