ಮೈಸೂರಿನಲ್ಲಿ ಮಾ.10 ರಿಂದ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ.

 

ಮೈಸೂರು,ಮಾರ್ಚ್,4,2022(www.justkannada.in): ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮಾರ್ಚ್ 10 ರಿಂದ 15 ರ ವರೆಗೆ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ ಆಯೋಜನೆ ಮಾಡಲಾಗಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ನಂದೀಶ್ ಹಂಚ್ಯಾ ಹೇಳಿದಿಷ್ಟು…

ಕನ್ನಡ ಪುಸ್ತಕ ಪ್ರಾಧಿಕಾರದಿಂದ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ ಆಯೋಜನೆ ಮಾಡಲಾಗಿದೆ. ಕರೋನಾ ಕಾರಣದಿಂದ ಪುಸ್ತಕ ಮೇಳ ಆಯೋಜನೆ ಮಾಡಲು ಸಾಧ್ಯವಾಗಿರಲಿಲ್ಲ. ಮಾರ್ಚ್ 10 ರಂದು 11 ಗಂಟೆಗೆ ಸಂಸದ ಪ್ರತಾಪ ಸಿಂಹ ಉದ್ಘಾಟಿಸಿಲಿದ್ದಾರೆ.

ರಾಜ್ಯದ ವಿವಿಧ ಭಾಗದ 70 ಕ್ಕೂ ಹೆಚ್ವು ಪ್ರಕಾಶನಗಳು ಭಾಗವಹಿಸಲಿವೆ. ಜೊತೆಗೆ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮಾರ್ಚ್ 15. ರಂದು ಪ್ರಕಾಶಕರ ದ್ವಿತೀಯ ಸಮ್ಮೇಳನ ಆಯೋಜನೆ ಮಾಡಲಾಗಿದೆ. ಪ್ರಕಾಶಕರ ಸಮ್ಮೇಳನ ಮಹಾರಾಜ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಆಯೋಜನೆ ಮಾಡಲಾಗಿದೆ.

ಸಮ್ಮೇಳನವು ಸುತ್ತೂರು ಶ್ರೀ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿದೆ. ಪ್ರಕಾಶಕರ ಸಮ್ಮೇಳನದ ಅಧ್ಯಕ್ಷರಾಗಿ ಟಿ ಎಸ್ ಛಾಯಾಪತಿ,ಉದ್ಘಟಕಾರಾಗಿ ಸಚಿವ ಎಸ್ ಟಿ ಸೋಮಶೇಖರ್, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

Key words: Discount-Sale -Kannada Books – May 10th – Mysore-nandish.hanche