ಸಚಿವ ಸಂಪುಟ ವಿಸ್ತರಣೆ ವಿಚಾರ: ಇಂದು ದೆಹಲಿಗೆ ಸಿಎಂ ಬಿಎಸ್ ಯಡಿಯೂರಪ್ಪ…

Promotion

ಕಲ್ಬುರ್ಗಿ,ಸೆಪ್ಟಂಬರ್,17,2020(www.justkannada.in):   ಹಲವು ದಿನಗಳ ಬಳಿಕ ಪ್ರಧಾನಿ ಮೋದಿ ಸೇರಿ ಕೇಂದ್ರ ಸಚಿವರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ದೆಹಲಿಗೆ ತೆರಳುತ್ತಿದ್ದಾರೆ. ಇಂದು ರಾತ್ರಿ ಅಥವಾ ನಾಳೆ ಹೈಕಮಾಂಡ್ ಭೇಟಿ ಮಾಡಿ ಚರ್ಚೆ ಮಾಡಲಿದ್ದಾರೆ. jk-logo-justkannada-logo

ಈ ಕುರಿತು ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಇಂದು ಮತ್ತು ನಾಳೆ ದೆಹಲಿಯಲ್ಲೇ ಇರಲಿದ್ದೇನೆ.  ಪ್ರಧಾನಿ ಮೋದಿ ಭೇಟಿಗೆ ಸಮಯ ನೀಡಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಅವರನ್ನ ಭೇಟಿಯಾಗುತ್ತೇನೆ. ಜತೆಗೆ ಹಲವು ಕೇಂದ್ರ ಸಚಿವರನ್ನೂ ಬೇಟಿಯಾಗಿ ಚರ್ಚಿಸುತ್ತೇನೆ ಎಂದರು.discuss-cabinet-extension-delhi-cm-bs-yeddyurappa

ದೆಹಲಿ ಭೇಟಿ ವೇಳೆ ಪ್ರಧಾನಿ ಮೋದಿ ಮತ್ತು ಹಲವರ ಜತೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಕಲಬುರಗಿಯಿಂದಲೇ ಸಿಎಂ ಬಿಎಸ್ ಯಡಿಯೂರಪ್ಪ ವಿಶೇಷ ವಿಮಾನದಲ್ಲಿ ಮಧ್ಯಾಹ್ನ 1 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ದೆಹಲಿಯಲ್ಲಿಯೇ ಇರಲಿದ್ದಾರೆ.

Key words: Discuss –cabinet- Extension – Delhi – CM BS Yeddyurappa