ಡಿಎಂಕೆ ಜೊತೆ ಚರ್ಚಿಸಿ ಕಾವೇರಿ ನದಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಿ- ಸರ್ಕಾರಕ್ಕೆ ಮಾಜಿ ಸಿಎಂ ಬಿಎಸ್ ವೈ ಸಲಹೆ.

Promotion

ಬೆಂಗಳೂರು,ಸೆಪ್ಟಂಬರ್,21,2023(www.justkannada.in): ತಮಿಳುನಾಡಿಗೆ ಮತ್ತೆ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ ಹಿನ್ನೆಲೆ ಈ ಕುರಿತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಬಿಎಸ್ ವೈ,  ಮಿತ್ರ ಪಕ್ಷ ಡಿಎಂಕೆ ಜೊತೆ ಕಾಂಗ್ರೆಸ್​​ ಸರ್ಕಾರ ಮಾತನಾಡಬೇಕು. ಡಿಎಂಕೆ ಜೊತೆ ಚರ್ಚಿಸಿ ಕಾವೇರಿ ನದಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಿ. ಕೇಂದ್ರ ಮಧ್ಯ ಪ್ರವೇಶ ಮಾಡುವಂತೆ ಒತ್ತಾಯ ಮಾಡುವುದು ಸರಿಯಲ್ಲ. ತಮಿಳುನಾಡಿಗೆ ನೀರು ಬಿಟ್ಟು ಸರ್ಕಾರ ತಪ್ಪು ಮಾಡಿದೆ ಎಂದರು.

ಕೋರ್ಟ್ ನಲ್ಲಿ ಸರ್ಕಾರ ವಾದ ಮಂಡಿಸುವಲ್ಲಿ ವಿಫಲವಾಗಿದೆ. ಕೆಲ ತಿಂಗಳಲ್ಲಿ ರಾಜ್ಯದಲ್ಲಿ ನೀರಿನ ಬರ ಎದುರಾಗುವ ಸಾಧ್ಯತೆ ಇದೆ. ಮೊದಲೇ ತಮಿಳುನಾಡಿಗೆ ಸರ್ಕಾರ ನೀರು ಬಿಟ್ಟು ತಪ್ಪು ಮಾಡಿದೆ ಎಂದು ಬಿಎಸ್ ವೈ ಖಂಡಿಸಿದರು.

Key words: discuss – DMK – solve – Cauvery –river- problem- government-BS yeddyurappa