ಬಹಿರಂಗವಾಗಿ ಚರ್ಚೆ ನಡೆಸಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ- ಸಚಿವ ಡಾ.ಕೆ.ಸುಧಾಕರ್.

Promotion

ಚಿಕ್ಕಬಳ್ಳಾಪುರ,ಆಗಸ್ಟ್,23,2021(www.justkannada.in): ಬಹಿರಂಗವಾಗಿ ಚರ್ಚೆ ನಡೆಸಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಇಂದು ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಉನ್ನತ ಶಿಕ್ಷಣದಲ್ಲಿ ಮಾತ್ರ ಹೊಸ ನೀತಿ ಜಾರಿ ಮಾಡುತ್ತೇವೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಎಲ್ಲಾ ವರ್ಗದ ಜನರಿಗೆ ಶಿಕ್ಷಣ ನೀಡುವುದಕ್ಕೆ ಸಹಕಾರಿಯಾಗುತ್ತದೆ. ಈ ಬಗ್ಗೆ ಬಹಿರಂಗವಾಗಿ ಚರ್ಚಿಸಿಯೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗುತ್ತಿದೆ ಎಂದರು.

Key words: Discuss -publicly – implement -National Education Policy-Minister- Dr. K. Sudhakar.