ಸದಾಶಿವ ಆಯೋಗದ ವರದಿ ಬಹಿರಂಗ ಚರ್ಚಿಸಿ ಶಿಫಾರಸು ಮಾಡಿ: ಭೋವಿ ಕ್ಷೇಮಾಭಿವೃದ್ಧಿ ಸಂಘದ ಮನವಿ

ಮೈಸೂರು, ಸೆಪ್ಟೆಂಬರ್ 20, 2020 (www.justkannada.in): ನ್ಯಾ. ಸದಾಶಿವ ಆಯೋಗದ ವರದಿಯನ್ನು ಬಹಿರಂಗ ಚರ್ಚೆಗೆ ಒಳಪಡಿಸದೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬಾರದೆಂದು ಒತ್ತಾಯಿಸಿ ಮಂಜುನಾಥಪುರ ಭೋವಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಒತ್ತಾಯಿಸಿ ಮನವಿ ಮಾಡಿತು.

ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಶಾಸಕ ಎಲ್. ನಾಗೇಂದ್ರ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಭೋವಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.

ಪಾಲಿಕೆ ಸದಸ್ಯ ವಿ. ರಮೇಶ್ ನೇತೃತ್ವದಲ್ಲಿ ಶಾಸಕ ಎಲ್. ನಾಗೇಂದ್ರ ಅವರಿಗೆ ಮನವಿ ಸಲ್ಲಿಸಿದ ಪದಾಧಿಕಾರಿಗಳು, ಕೆಲವರು ಲಂಬಾಣಿ, ಭೋವಿ, ಕೊರಚ ಮತ್ತು ಕೊರಮ ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ತೆಗೆದುಹಾಕಬೇಕೆಂಬ ಚರ್ಚೆ ಹುಟ್ಟು ಹಾಕುತ್ತಿದ್ದಾರೆ. ಈ ನಾಲ್ಕು ಸಮುದಾಯದವರು ಆರ್ಥಿಕ, ಶೈಕ್ಷಣಿಕವಾಗಿ ತೀರಾ ಹಿಂದುಳಿದ ಸಮುದಾಯದವರು ಹಿಂದಿನಿಂದಲೂ ಕಲ್ಲು ಬಂಡೆಯನ್ನು ಒಡೆದು ಜೀವನ ಸಾಗಿಸುತ್ತಿದ್ದಾರೆ.

ಆದ್ದರಿಂದ ಈ ಸಮುದಾಯಗಳಿಗೆ ಸಾಮಾಜಿಕವಾಗಿ ಅನ್ಯಾಯವಾಗಬಾರದು. ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ನ್ಯಾ. ನಾಗಮೋಹನ ದಾಸ್ ವರದಿಯನ್ನು ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಬೇಕು ಎಂದು ಮನವಿ ಸಲ್ಲಿಸಲಾಯಿತು.