ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರಿಂದ ಸಿಡಿಗಳನ್ನ ಪ್ರದರ್ಶಿಸಿ ಧರಣಿ…

Promotion

ಬೆಂಗಳೂರು,ಮಾರ್ಚ್,23,2021(www.justkannada.in) ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ವಿಷಯ ಪ್ರಸ್ತಾಪಿಸಿ ಚರ್ಚೆ ನಡೆಸಲಾಗಿತ್ತು. ಈ ನಡುವೆ ಇದೀಗ ಕಾಂಗ್ರೆಸ್ ಸದಸ್ಯರು ವಿಧಾನಸಭೆಯಲ್ಲಿ ಸಿಡಿಗಳನ್ನ ಪ್ರದರ್ಶಿಸಿ ಧರಣಿ ನಡೆಸಿದ್ದಾರೆ.jk

ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್  ಸದಸ್ಯರು ಸದನದ ಬಾವಿಗಿಳಿದು ಸಿಡಿ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಅಲ್ಲದೆ ಇದು ಸಿಡಿ ಸರ್ಕಾರವೆಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.  ವಿಪಕ್ಷ ನಾಯಕ ಸಿದ್ಧರಾಮಯ್ಯ, ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು.display-cd-congress-member-protest-assembly

ಕಾಂಗ್ರೆಸ್ ಸದಸ್ಯರ ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಲಾಪವನ್ನ 10 ನಿಮಿಷಗಳ ಕಾಲ ಮುಂದೂಡಿದರು.

Key words: Display – CD Congress – member –protest-assembly.