ಮಾಜಿ ಸ್ಪೀಕರ್  ಕೃಷ್ಣ ಮನೆಗೆ ಅನರ್ಹ ಶಾಸಕ ನಾರಾಯಣಗೌಡ ಭೇಟಿ: ಚುನಾವಣೆಗೆ ಸಹಕರಿಸುವಂತೆ ಮನವಿ….

Promotion

ಮೈಸೂರು,ನ,16,2019(www.justkannada.in):  ಡಿಸೆಂಬರ್ 5 ರಂದು ಕೆ.ಆರ್ ಪೇಟೆ ಉಪಚುನಾವಣೆ ಹಿನ್ನೆಲೆ ಅನರ್ಹ ಶಾಸಕ ಕೆ.ಸಿ ನಾರಾಯಣಗೌಡ ಇಂದು ಮಾಜಿ ಸ್ಪೀಕರ್ ಕೃಷ್ಣ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದರು.

ಇಂದು ಮೈಸೂರಿನ ನಿವಾಸಕ್ಕೆ ಭೇಟಿ ನೀಡಿದ ಅನರ್ಹ ಶಾಸಕ ನಾರಾಯಣಗೌಡ ಮಾಜಿ ಸ್ಪೀಕರ್ ಕೃಷ್ಣ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು. ಕೃಷ್ಣ ಅವರು ಕೃಷ್ಣರಾಜಪೇಟೆ ತಾಲೂಕಿನ ಹಿರಿಯ ರಾಜಕೀಯ ಮುತ್ಸದ್ಧಿಯಾಗಿದ್ದಾರೆ. ಭೇಟಿ ವೇಳೆ ಉಪಚುನಾವಣೆ ಕುರಿತು ಚರ್ಚೆ ನಡೆಸಿದ್ದು ಚುನಾವಣೆಯಲ್ಲಿ ಸಹಕಾರ ನೀಡುವಂತೆ ಕೃಷ್ಣ ಅವರಿಗೆ ನಾರಾಯಣಗೌಡ ಮನವಿ ಮಾಡಿದ್ದಾರೆ.

ಕೆ.ಆರ್ ಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಗೌಡ ಸ್ಪರ್ಧಿಸುತ್ತಿದ್ದಾರೆ.

Key words: disqualified MLA- visits -Former Speaker –Krishna-Appeal – cooperation – election.