ಅತೃಪ್ತರ ರಾಜೀನಾಮೆ ವಿಚಾರ ಕುರಿತು ಸಿಎಂ ಹೆಚ್.ಡಿ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ಏನು ಗೊತ್ತೆ…?

Promotion

ಬೆಂಗಳೂರು,ಜು,8,2019(www.justkannada.in)  ಸಮ್ಮಿಶ್ರ ಸರ್ಕಾರದ ವಿರುದ್ದ ಅಸಮಾಧಾನಗೊಂಡು 13 ಮಂದಿ ಅತೃಪ್ತ ಶಾಸಕರು ರಾಜೀನಾಮೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಹೆಚ್,ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ವಿಧಾನಸೌಧದಲ್ಲಿ ಕಬ್ಬುಬೆಳೆಗಾರರ ಜತೆ ಸಭೆ ನಡೆಸಿದ ಬಳಿಕ  ಅತೃಪ್ತ ಶಾಸಕರ ರಾಜೀನಾಮೆ ಕುರಿತು ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿಯವರು ಏನು ಮಾಡ್ತಾರೆ. ಬೇರೆಯವರು ಏನು ಮಾಡ್ತಾರೆ.  ಇದೆಲ್ಲಾ ನನಗೆ ಸಂಬಂಧ ಇಲ್ಲ.  ರಾಜ್ಯದ ರಾಜಕೀಯ ಬೆಳವಣಿಗೆ ಬಗ್ಗೆ ಗಮನ ಹರಿಸುತ್ತಿಲ್ಲ. ರಾಜ್ಯದ ಜವಾಬ್ದಾರಿ ಕಡೆಯಷ್ಟೇ ನನ್ನ ಗಮನ. ನನ್ನ ಜವಾಬ್ದಾರಿಯನ್ನ ನಿರ್ವಹಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಮೇರಿಕಾ ಪ್ರವಾಸದಲ್ಲಿದ್ದ ವೇಳೆ 13 ಮಂದಿ ಅತೃಪ್ತ ಶಾಸಕರು ರಾಜೀನಾಮೆ ನೀಡಿ ಮುಂಬೈ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದು ಈ ನಡುವೆ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ಪಕ್ಷದ ನಾಯಕರು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಇದಕ್ಕಾಗಿ ಕಾಂಗ್ರೆಸ್ ನ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ.

Key words: Dissatisfied MLA- resignation- issue-  CM HD Kumaraswamy -reaction