ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಆಹಾರ ಕಿಟ್ ವಿತರಣೆ: 5.5 ಟನ್ ಆಮ್ಲಜನಕ ಮತ್ತು ವೆಂಟಿಲೇಟರ್ ಮೈಸೂರು ಜಿಲ್ಲಾಡಳಿತಕ್ಕೆ ಹಸ್ತಾಂತರ.

kannada t-shirts

ಮೈಸೂರು, ಜೂನ್ 10,2021(www.justkannada.in):  ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಬಡಕುಟುಂಬದವರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.jk

ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಗುರುವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧಮಾ೯ಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮೈಸೂರು ಜಿಲ್ಲಾ ಆಡಳಿತಕ್ಕೆ ಕಳುಹಿಸಿ ಕೊಟ್ಟಿರುವ 5.5 ಟನ್ ಆಮ್ಲಜನಕ, SMT ಆಸ್ಪತ್ರೆಗೆ 1ವೆಂಟಿಲೇಟರ್ ಅನ್ನ ಸಚಿವ ಎಸ್ ಟಿ ಸೋಮಶೇಖರ್ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಲ್ಲಾ ಪಂಚಾಯತಿ ಸಿ.ಇ.ಒ. ಎ.ಎಂ.ಯೋಗೀಶ್, ಮಹಾನಗರ ಪಾಲಿಕೆಯ ಆಯುಕ್ತ ಲಕ್ಷ್ಮಿಕಾಂತ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ. ಮಂಜುನಾಥಸ್ವಾಮಿ, ಗ್ರಂಥಾಲಯ ಉಪ ನಿರ್ದೇಶಕ ಹಾಗೂ ಆಕ್ಸಿಜನ್ ನೋಡಲ್ ಅಧಿಕಾರಿ ಬಿ. ಮಂಜುನಾಥ್, ಮತ್ತಿತರರು ಉಪಸ್ಥಿತರಿದ್ದರು.

Key words: Distribution – food kit – Dharmasthala Rural Development Agency-oxygen-ventilator- handed over – Mysore District.

website developers in mysore