ಸಿಎಂ ಬಿಎಸ್ ವೈರಿಂದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ…

ಬೆಂಗಳೂರು,ಅಕ್ಟೋಬರ್, 20,2020(www.justkannada.in): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು  ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಿದರು.distribution-privileges-beneficiaries-various-schemes-shivamogga-cm-bs-yedduyurappa

ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳ ವಿತರ‌ಣಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಶ್ರೀ ‌ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು.   ಬಳಿಕ ಫಲಾನುಭವಿಗಳಿಗೆ ಸವಲತ್ತುಗಳನ್ನು ‌ವಿತರಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.distribution-privileges-beneficiaries-various-schemes-shivamogga-cm-bs-yedduyurappa

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಸಿಇಒ ವೈಶಾಲಿ ಮತ್ತಿತರರು ಉಪಸ್ಥಿತರಿದ್ದರು.

Key words: Distribution -privileges – beneficiaries -various -schemes –shivamogga-CM BS yedduyurappa