ದೀಪಾವಳಿ ಆಚರಣೆ: ಇಲ್ಲಿದೆ ರಾಜ್ಯ ಸರಕಾರದ ಮಾರ್ಗಸೂಚಿ…

ಬೆಂಗಳೂರು, ಅಕ್ಟೋಬರ್ 31, 2021 (www.justkannada.in): ದೀಪಾವಳಿ ಆಚರಣೆಗೆ ರಾಜ್ಯ ಸರಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದೆ.

ಪರಿಸರ ಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ರಾಜ್ಯ ಸರ್ಕಾರ ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ನವೆಂಬರ್ 1 ರಿಂದ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದೆ. ಪರವಾನಗಿ ಪಡೆದವರು ಮಾತ್ರ ಪಟಾಕಿ ಮಾರಾಟ ಮಾಡಬೇಕೆಂದು ರಾಜ್ಯ ಸರಕಾರ ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ.

ಕೊರೊನಾ ಹಾವಳಿ ಮರುಕಳಿಸುವ ಆತಂಕ ಇರುವುದರಿಂದ ಇದಕ್ಕೆ ರಾಜ್ಯ ಸರ್ಕಾರ ಕಡಿವಾಣ ಹಾಕಿದ್ದು ಹೆಚ್ಚಿನ ಜನ ಸೇರದಿರಲು ಮನವಿ ಮಾಡಿಕೊಂಡಿದೆ.

ನವೆಂಬರ್ 1 ರಿಂದ ನವೆಂಬರ್ 10 ರವರೆಗೆ ಪಟಾಕಿ ಮಾರಾಟಕ್ಕೆ ಅನುಮತಿ ಪಡೆದ ವಿತರಕರು ಗೊತ್ತುಪಡಿಸಿದ ಪ್ರದೇಶಗಳಲ್ಲಿ ಅಂಗಡಿಗಳನ್ನು ಸ್ಥಾಪಿಸಲು ಅನುಮತಿಸಲಾಗುವುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.