ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ನ್ಯಾಯ ಸಿಗುವ ಭರವಸೆ ಸಿಕ್ಕಿದೆ : ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ

ಬೆಂಗಳೂರು,ಡಿಸೆಂಬರ್,03,2020(www.justkannada.in) : ಶಾಸಕರ ಮನೆಗೆ ಬೆಂಕಿ, 2ಠಾಣಾ ವ್ಯಾಪ್ತಿಯಲ್ಲಿ ಗಲಭೆ ಕೇಸ್ ನಲ್ಲಿ ಜಾಕೀರ್ ಬಂಧನದಿಂದಾಗಿ ನ್ಯಾಯ ಸಿಗುವ ಭರವಸೆ ಸಿಕ್ಕಿದೆ ಎಂದು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿದ್ದಾರೆ.logo-justkannada-mysore

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ನ್ಯಾಯಾಲಯ ಹಾಗೂ ಮಾಧ್ಯಮಗಳಿಂದಾಗಿ ನ್ಯಾಯ ದೊರಕುತ್ತಿದೆ. ಇವರೆಲ್ಲರಿಗೂ ಅಭಿನಂದನೆ ಸಲ್ಲಿಸುವೆ. ಜೊತೆಗೆ ಸಂಪತ್ ರಾಜ್ ಹಾಗೂ ಜಾಕೀರ್ ಅನ್ನು ಉಚ್ಛಾಟಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಮನವಿ ಪತ್ರ ಕೊಟ್ಟಿದ್ದೇನೆ ಎಂದರು.

ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಯಾವುದೇ ವಿಚಾರಣೆ ನಡೆಸಿಲ್ಲ

ಆದರೆ, ಡಿಕೆಶಿ ಶಿಸ್ತುಪಾಲನಾ ಸಮಿತಿಗೆ ಕೊಟ್ಟಿರುವುದಾಗಿ ಹೇಳಿದ್ದಾರೆ. ಆ ಸಮಿತಿ ಈವರೆಗೂ ಒಂದೇ ಒಂದು ನೋಟಿಸ್ ಕೂಡ ಕೊಟ್ಟಿಲ್ಲ. ಜೊತೆಗೆ, ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಯಾವುದೇ ವಿಚಾರಣೆ ನಡೆಸಿಲ್ಲ ಎಂದು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅಸಮಾಧಾನ ಹೊರಹಾಕಿದರು.

ಬಿಜೆಪಿ ಸೇರುವ ಪ್ರಶ್ನೆಯಿಲ್ಲ

ನಾನು ಏಕಾಂಗಿಯಾಗಿ ಹೋರಾಡುತ್ತಿದ್ದೇನೆ. ಶಿಸ್ತುಪಾಲನಾ ಸಮಿತಿ ಸ್ಪಂದಿಸದಿದ್ದಲ್ಲಿ ಎಐಸಿಸಿಗೆ ಪತ್ರ ಬರೆಯುವೆ. ನನಗೆ ನ್ಯಾಯ ಸಿಗಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಹಾಗಂತ ನಾನು ಪಕ್ಷ ಬಿಡುವುದಿಲ್ಲ. ಬಿಜೆಪಿ ಸೇರುವ ಪ್ರಶ್ನೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ಡಿ.16ರವರೆಗೆ ಜಾಕೀರ್ ಹುಸೇನ್ ಗೆ ನ್ಯಾಯಾಂಗ ಬಂಧನ

DJ Halli-KG Halli-Riot-hopes-justice-Legislator-intact-Srinivas Murthy

ಶಾಸಕರ ಮನೆಗೆ ಬೆಂಕಿ, 2 ಠಾಣಾ ವ್ಯಾಪ್ತಿಯಲ್ಲಿ ಗಲಭೆ ಕೇಸ್ ನಲ್ಲಿ ಡಿ.16ರವರೆಗೆ ಜಾಕೀರ್ ಹುಸೇನ್ ಗೆ ನ್ಯಾಯಾಂಗ ಬಂಧನವಾಗಿದೆ. ಸಿಸಿಬಿ ಅಧಿಕಾರಿಗಳು ಇಂದು ಜಾಕೀರ್ ನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಇಂದು ಸರ್ಕಾರಿ ರಜೆಯಿದ್ದ ಹಿನ್ನೆಲೆಯಲ್ಲಿ ಕೋರಮಂಗಲದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಜಾಕೀರ್ ರನ್ನು ಮನೆಗೆ ಹಾಜರುಪಡಿಸಲಾಗಿತ್ತು. ಸದ್ಯ ರಜೆ ಇದ್ದ ಹಿನ್ನೆಲೆಯಲ್ಲಿ ಜಾಕೀರ್ ನನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಲಾಗಿದೆ. ಸಿಸಿಬಿ ಅಧಿಕಾರಿಗಳು ನಾಳೆ ಮತ್ತೆ ಜಾಕೀರ್ ಕಸ್ಟಡಿಗೆ ಕೇಳಲಿದ್ದಾರೆ ಎಂದು ತಿಳಿದು ಬಂದಿದೆ.

key words : DJ Halli-KG Halli-Riot-hopes-justice-Legislator-intact-Srinivas Murthy