ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರ ತರುವ ಭರವಸೆ ನೀಡಿದ್ದೇವೆ- ಡಿ.ಕೆ ಶಿವಕುಮಾರ್.

Promotion

ನವದೆಹಲಿ,ಫೆಬ್ರವರಿ,25,2022(www.justkannada.in): ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರುವುದಾಗಿ ರಾಹುಲ್ ಗಾಂಧಿ ಅವರಿಗೆ ಭರವಸೆ ನೀಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.

ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಜತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆ ನಡೆಸಿ ಚರ್ಚಿಸಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್, ರಾಜ್ಯದ ವಿವಿಧ ವಿದ್ಯಾಮಾನಗಳ ಬಗ್ಗೆ ರಾಹುಲ್ ಗಾಂಧಿ ಅವರಿಗೆ ಮಾಹಿತಿ ನೀಡಿದ್ದೇವೆ.  ಮುಂದಿನ ಚುನಾವಣೆಗೆ ಪಕ್ಷಸಂಘಟನೆ ಮಾಡುವಂತೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ ಎಂದರು.

ಫೆಬ್ರವರಿ 27 ರಿಂದ ಮತ್ತ ಮೇಕೆದಾಟು ಪಾದಯಾತ್ರೆ ಆರಂಭವಾಗಲಿದೆ. ಪಾದಯಾತ್ರೆ ನಿಲ್ಲಿಸಿದ ಸ್ಥಳದಿಂದಲೇ ಆರಂಭಿಸುತ್ತೇವೆ. ಬಹಳಷ್ಟು ಸಂಘಟನೆಗಳು ಹೋರಾಟಕ್ಕೆ ಬೆಂಬಲ ಘೋಷಿಸುವುದಾಗಿ ಹೇಳಿದ್ದವು. ಎಲ್ಲರಿಗೂ ಮನವಿ ಮಾಡುತ್ತೇನೆ. ರಾಜ್ಯದ ಹಿತಕ್ಕೆ ಎಲ್ಲರೂ ಒಂದಾಗಬೇಕು ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: DK Shivakumar-congress-power