ಕನಕಪುರದಲ್ಲಿ ಏಸುಕ್ರಿಸ್ತ ಪ್ರತಿಮೆ ನಿರ್ಮಾಣಕ್ಕೆ ಡಿ.ಕೆ ಶಿವಕುಮಾರ್ ಶಿಲಾನ್ಯಾಸ ಹಿನ್ನೆಲೆ: ಟ್ವಟ್ಟರ್ ನಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ವ್ಯಂಗ್ಯ…

Promotion

ಬೆಂಗಳೂರು,ಡಿ,27,2019(www.justkannada.in):  ಕನಕಪುರದಲ್ಲಿ ಏಸುಕ್ರಿಸ್ತ ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಶಿಲಾನ್ಯಾಸ ನೆರವೇರಿಸಿದ ಹಿನ್ನೆಲೆ ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಕೆ.ಎಸ್ ಈಶ್ವರಪ್ಪ,  ನಮ್ಮ ಪವಿತ್ರ ಭಾರತ ದೇಶದಲ್ಲಿ ಹುಟ್ಟಿದ ಪ್ರಭು ಶ್ರೀರಾಮನ ಭವ್ಯಮಂದಿರ ನಿರ್ಮಿಸಲು ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನವರು ತಮ್ಮ ನಾಯಕಿಯನ್ನ ಮೆಚ್ಚಿಸಲು ತಮ್ಮದೇ ಹಣದಲ್ಲಿ ಯೇಸುವಿನ ಪ್ರತಿಮೆ ನಿರ್ಮಿಸಲು ಹೊರಟಿದ್ದಾರೆ.  ಇನ್ನು ಇವರು ಕೆಪಿಸಿಸಿ ಅಧ್ಯಕ್ಷರಾಗುವುದನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಸ್ವತಃ ಸಿದ್ಧರಾಮಯ್ಯರಿಂದಲೂ ತಡೆಯಲು ಆಗಲ್ಲ ಎಂದು ಲೇವಡಿ ಮಾಡಿದ್ದಾರೆ.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲಿಬೆಟ್ಟದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿಶ್ವದಲ್ಲಿಯೇ ಅತಿ ಎತ್ತರದ 114 ಅಡಿಯ ಏಕಶಿಲೆ ಯೇಸುಕ್ರಿಸ್ತರ ಪ್ರತಿಮೆ ನಿರ್ಮಾಣದ ಶಿಲಾನ್ಯಾಸವನ್ನು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಕಳೆದ ಬುಧವಾರ ನೆರವೇರಿಸಿದ್ದರು.

Key words: DK Shivakumar – construction – Jesus statue – Kanakapura-Minister- KS Eshwarappa – Twitter.